Karnataka : ಬಂಗಾಳ ಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದ ಹಲವು ಕಡೆ ಮಾರ್ಚ್ 7 ಮತ್ತು ಮಾರ್ಚ್ 8 ಮಳೆಯಾಗುವ (Rain) ಸಾಧ್ಯತೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಾರ್ಚ್ 7 ರಂದು ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮತ್ತು ಮಾರ್ಚ್ 8 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ವಾಯುಭಾರ ಕುಸಿತವಾಗಿರುವ ಬಗ್ಗೆ ಎರಡು ದಿನ ಮುಂಚಿತವಾಗಿ ಮಾಹಿತಿ ನೀಡಿದ್ದ ಹವಾಮಾನ ಇಲಾಖೆ, ವಾಯುಭಾರ ಕುಸಿತದ ಪ್ರಭಾವ ವಾಯುವ್ಯ ದಿಕ್ಕಿನಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯ ಉತ್ತರ ತಮಿಳುನಾಡು ಕರಾವಳಿಯ ಕಡೆಗೆ ಸಾಗಲಿದೆ ಎಂದು ಹೇಳಿತ್ತು. ಆದರಿಂದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಕೂಡ ಎರಡು ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಅಂದಾಜಿಸಲಾಗಿದೆ.