back to top
18.6 C
Bengaluru
Friday, February 6, 2026
HomeKarnatakaKarnataka ದಲ್ಲಿ ಮೊತ್ತಮೊದಲಿಗೆ ಅಂಗವಿಕಲರ Census ಆರಂಭ

Karnataka ದಲ್ಲಿ ಮೊತ್ತಮೊದಲಿಗೆ ಅಂಗವಿಕಲರ Census ಆರಂಭ

- Advertisement -
- Advertisement -

ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಅಂಗವಿಕಲರ ಜನಗಣತಿ (Census of Persons with Disabilities) ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಜನಗಣತಿ ಈ ವರ್ಷದಲ್ಲೇ ಪ್ರಾರಂಭವಾಗಲಿದೆ ಎಂದು ಅಂಗವಿಕಲರ ಹಕ್ಕುಗಳ ರಾಜ್ಯ ಆಯುಕ್ತರಾದ ದಾಸ್ ಸೂರ್ಯವಂಶಿ ತಿಳಿಸಿದ್ದಾರೆ.

ಜಿಲ್ಲೆಯ VRW ಮತ್ತು MRW ಸಿಬ್ಬಂದಿಗೆ ತರಬೇತಿ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಒಂಬತ್ತು ತಿಂಗಳ ಹಿಂದೆ ಸಿಎಂ ಸಿದ್ದರಾಮಯ್ಯ ಮತ್ತು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದೇವೆ ಎಂದರು.

ಈ ಜನಗಣತಿ ಮೂಲಕ ಅಂಗವಿಕಲರಿಗೆ ಸರ್ಕಾರ ನೀಡುವ ನೆರವು, ಸೌಲಭ್ಯಗಳು ಹೇಗಿರಬೇಕು ಎಂಬ ಬಗ್ಗೆ ಸರಿಯಾದ ಯೋಜನೆ ಹಾಕಿಕೊಳ್ಳಲು ಸಾಧ್ಯವಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರೂ ಬಜೆಟ್‌ನಲ್ಲಿ ಈ ಸಮೀಕ್ಷೆ ನಡೆಸುವುದಾಗಿ ಘೋಷಿಸಿದ್ದಾರೆ.

ಸಿಬ್ಬಂದಿಗೆ ತರಬೇತಿ ನೀಡಿ, ಮನೆ ಮನೆಗೆ ಭೇಟಿ ನೀಡಿ ಈ ಕೆಳಗಿನ ಮಾಹಿತಿಗಳನ್ನು ಸಂಗ್ರಹಿಸಲಾಗುವುದು.

  • ಎಷ್ಟು ಜನ ಯುಡಿಐಡಿ ಕಾರ್ಡ್ ಪಡೆದಿದ್ದಾರೆ
  • ಎಷ್ಟು ಜನ ಬಾಕಿ ಇದ್ದಾರೆ
  • ಎಷ್ಟು ಜನರಿಗೆ ಮಾಸಾಶನ ತಲುಪುತ್ತಿದೆ

ಅದೇ ರೀತಿ ಗ್ರಾಮ ಪಂಚಾಯಿತಿಗಳಲ್ಲಿ ಕನಿಷ್ಟ ಎರಡು ಅಂಗವಿಕಲರ ಸ್ವಸಹಾಯ ಗುಂಪುಗಳನ್ನು ರಚಿಸಲಾಗುವುದು. ಜೊತೆಗೆ, “ಸುಗಮ್ಯ ಯಾತ್ರೆ” ಎಂಬ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗುತ್ತಿದೆ.

ಇದಕ್ಕೂ ಮೊದಲು ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಉದ್ದೇಶದಿಂದ ಸಮಗ್ರ ಗಣತಿಯನ್ನು ಪ್ರಾರಂಭಿಸಿದೆ. ಇದು ಸಮಾಜದಲ್ಲಿ ಹಿಂದುಳಿದ ಸಮುದಾಯಗಳಿಗೆ ಬಲ ನೀಡುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಲಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page