back to top
18.1 C
Bengaluru
Friday, November 22, 2024
HomeKarnatakaBengaluru Urbanಕಾಶಿಯಾತ್ರೆಗೆ ರಾಜ್ಯ ಸರ್ಕಾರದಿಂದ `Bharat Gaurav' Train

ಕಾಶಿಯಾತ್ರೆಗೆ ರಾಜ್ಯ ಸರ್ಕಾರದಿಂದ `Bharat Gaurav’ Train

- Advertisement -
- Advertisement -

Bengaluru (Bangalore) : ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ಸರ್‌ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ (Sir M Visvesvaraya Railway Terminal – Byappanahalli, Bengaluru) ಕಾಶಿ ಯಾತ್ರೆಗೆ (Kashi Yatra) ನಿಗದಿಪಡಿಸಿರುವ ‘ಭಾರತ್‌ ಗೌರವ್‌’ (Bharat Gaurav) ರೈಲಿನ ಪರಿಶಿಲನೆ ನಡೆಸಿ ಮಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ (Shashikala Annasaheb Jolle) ಅವರು ಮಾತನಾಡಿದರು.

ಶ್ರಾವಣ ಮಾಸದ ಕೊನೆಯ ವಾರದಲ್ಲಿ ರಾಜ್ಯದಿಂದ ಕಾಶಿ ಯಾತ್ರೆಗೆ ‘ಭಾರತ್‌ ಗೌರವ್‌’ ರೈಲು ಯೋಜನೆ ಪ್ರಾರಂಭವಾಗಲಿದೆ ಎಂದು ಅವರು ತಿಳಿಸಿದರು.

“ಜೀವನದಲ್ಲಿ ಒಮ್ಮೆಯಾದರೂ ಕಾಶಿ ಯಾತ್ರೆಯನ್ನು ಕೈಗೊಳ್ಳಬೇಕು ಎನ್ನುವುದು ಬಹುಪಾಲು ಹಿಂದುಗಳ ಆಸೆಯಾಗಿರುತ್ತದೆ. ಅದನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎನ್ನುವುದು ನನ್ನ ಆಶಯವಾಗಿತ್ತು” ಎಂದು ಹೇಳಿದರು.

ಈ ವಿಷಯವಾಗಿ ಸಹಕಾರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಈ ಸಂದರ್ಭದಲ್ಲಿ ಅವರು ಅಭಿನಂದಿಸಿದರು.

ಬೆಂಗಳೂರು-ವಾರಣಾಸಿ-ಅಯೋಧ್ಯೆ-ಪ್ರಯಾಗರಾಜ್‌-ಬೆಂಗಳೂರು ಮಾರ್ಗದಲ್ಲಿ ಭರತ್ ಗೌರವ್ ರೈಲು 7 ದಿನಗಳಲ್ಲಿ 4161 ಕಿಲೋಮೀಟರ್‌ಗಳಷ್ಟು ಸಾಗಲಿದೆ. 14 ಬೋಗಿಗಳನ್ನು ಈ ರೈಲು ಒಳಗೊಂಡಿದ್ದು, 11 ಬೋಗಿಗಳನ್ನು ಪ್ರಯಾಣಿಕರ ಪ್ರವಾಸಕ್ಕೆ ಕಾಯ್ದಿರಿಸಲಾಗಿದೆ. 3 ಟಯರ್‌ ಎಸಿಯ ವ್ಯವಸ್ಥೆ ಇರಲಿದ್ದು, ಒಂದು ಬೋಗಿಯನ್ನು ದೇವಸ್ಥಾನವಾಗಿ ಪರಿವರ್ತಿಸಿ ಯಾತ್ರಾರ್ಥಿಗಳ ಭಜನೆಗೆ ಅವಕಾಶ ನೀಡಲಾಗುವುದು. 11 ಬೋಗಿಗಳ ಮೇಲೆ ರಾಜ್ಯದ ಪ್ರಮುಖ 11 ದೇವಸ್ಥಾನಗಳ ಮಾಹಿತಿಯನ್ನು ಅಳವಡಿಸಲಾಗುವುದು. ಆಹಾರ, ನೀರು, ವಸತಿ, ಸ್ಥಳೀಯ ಸಾರಿಗೆ ಮತ್ತು ಇತರೆ ಮೂಲಭೂತ ಸೌಕರ್ಯಗಳಿಗೆ ರೈಲ್ವೇಯ ಅಧೀನ ಸಂಸ್ಥೆ ಐಆರ್‌ಸಿಟಿಸಿ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುವುದು. 7 ದಿನಗಳ ಪ್ರವಾಸಕ್ಕೆ ಅಂದಾಜು 15 ಸಾವಿರ ರೂಪಾಯಿ ವೆಚ್ಚವಾಗಲಿದ್ದು, ಇದರಲ್ಲಿ 5 ಸಾವಿರ ರೂಗಳನ್ನು ಸಹಾಯಧನವನ್ನಾಗಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಈ ಸಂಧರ್ಭದಲ್ಲಿ ಮುಜರಾಯಿ ಇಲಾಖೆಯ ಆಯುಕ್ತರಾದ ಶ್ರೀಮತಿ ರೋಹಿಣಿ ಸಿಂಧೂರಿ, ಸೌತ್‌ ವೆಸ್ಟರ್ನ್‌ ರೈಲ್ವೇಯ ಚೀಪ್‌ ಕಮರ್ಷಿಯಲ್‌ ಮ್ಯಾನೇಜರ್‌ ಡಾ ಅನೂಪ್‌ ದಯಾನಂದ್‌ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!

You cannot copy content of this page