ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ (Kashmir) ಬಗ್ಗೆ ಅನಗತ್ಯವಾಗಿ ಪ್ರಸ್ತಾಪಿಸಿದ್ದಕ್ಕಾಗಿ ಪಾಕಿಸ್ತಾನವನ್ನು (Pakistan) ಭಾರತ ಗಟ್ಟಿಯಾಗಿ ತರಾಟೆಗೆ ತೆಗೆದುಕೊಂಡಿದೆ. ಇಂತಹ ಹೇಳಿಕೆಗಳು ಪಾಕಿಸ್ತಾನದ ಹಕ್ಕನ್ನು ಸಮರ್ಥಿಸುವುದಿಲ್ಲ ಅಥವಾ ಗಡಿಯಾಚೆಗಿನ ಭಯೋತ್ಪಾದನೆಯ ಅವರನ್ನು ತಪ್ಪಿಸಿಕೊಳ್ಳಲು ಸಹಾಯ ಮಾಡದು ಎಂದು ಭಾರತ ಸ್ಪಷ್ಟಪಡಿಸಿದೆ.
ಪಾಕಿಸ್ತಾನ ಸದಾ ಜಮ್ಮು-ಕಾಶ್ಮೀರದ ಬಗ್ಗೆ ಉಲ್ಲೇಖ ಮಾಡುವ ಅಭ್ಯಾಸವನ್ನು ಮುಂದುವರಿಸಿಕೊಂಡಿದ್ದು, ಈ ಬಾರಿ ಪಾಕಿಸ್ತಾನದ ಮಾಜಿ ವಿದೇಶಾಂಗ ಕಾರ್ಯದರ್ಶಿ ತೆಹ್ಮಿನಾ ಜಂಜುವಾ ಅವರು ವಿಶ್ವಸಂಸ್ಥೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದರು.
ಈ ಆರೋಪಗಳ ವಿರುದ್ಧ ಭಾರತೀಯ ಖಾಯಂ ಪ್ರತಿನಿಧಿ, ರಾಯಭಾರಿ ಪಿ. ಹರೀಶ್, ಪಾಕಿಸ್ತಾನದ ಧರ್ಮಾಂಧ ಮನಸ್ಥಿತಿ ಎಲ್ಲರಿಗೂ ತಿಳಿದ ವಿಚಾರ ಎಂದು ಉಲ್ಲೇಖಿಸಿ, ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿಯೇ ಮುಂದುವರಿಯಲಿದೆ ಎಂಬುದನ್ನು ಪುನರುಚ್ಛರಿಸಿದರು.