Bengaluru (Bangalore) : ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ (Banquet Hall Vidhana Soudha) ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ನಾಡಪ್ರಭು ಕೆಂಪೇಗೌಡ (Kempe Gowda I) ರ 513 ನೇ ಜಯಂತ್ಯುತ್ಸವ (Birth Anniversary) ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಇನ್ಫೋಸಿಸ್ (Infosys) ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ (N.R. Narayana Murthy), ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ (S. M. Krishna) ಹಾಗೂ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ (Prakash Padukone) ರವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ‘ಕೆಂಪೇಗೌಡ ಅಂತರರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಮಾಡಿದರು. ಎನ್.ಆರ್. ನಾರಾಯಣಮೂರ್ತಿ ಪರವಾಗಿ ಅವರ ಪತ್ನಿ ಸುಧಾ ಮೂರ್ತಿ (Sudha Murty) ಮತ್ತು ಪ್ರಕಾಶ್ ಪಡುಕೋಣೆ ಪರವಾಗಿ ಅವರ ಸ್ನೇಹಿತ ವಿಮಲ್ ಕುಮಾರ್ ಪ್ರಶಸ್ತಿ (Award) ಸ್ವೀಕರಿಸಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಪಟ್ಟನಾಯಕನ ಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ ವಿಧಾನಸೌಧದಲ್ಲಿ ನಾಡಪ್ರಭು (Nadaprabhu) ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸಲು ಮುಖ್ಯಮಂತ್ರಿಗಳಿಗೆ ಕೋರಿದರು. ಇದ್ದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ “ಕೆಂಪೇಗೌಡರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಬೇಕು ಎಂಬ ನಿರ್ಣಯವನ್ನು ಬಿಬಿಎಂಪಿ ಕೌನ್ಸಿಲ್ 2012ರಲ್ಲೇ ಕೈಗೊಂಡಿದ್ದು ಇದಕ್ಕಾಗಿ ₹ 12 ಲಕ್ಷ ಅನುದಾನವನ್ನೂ ಕಾಯ್ದಿರಿಸಿತ್ತು. ಆದರೆ, ನಂತರ ಈ ನಿರ್ಣಯ ಅನುಷ್ಠಾನಕ್ಕೆ ಬರಲಿಲ್ಲ. ಈಗ ತಮ್ಮ ಸರ್ಕಾರ ಕೆಂಪೇಗೌಡರಿಗೆ ಗೌರವ ಸಲ್ಲಿಸುವ ಕಾರ್ಯ ಮಾಡಲಿದೆ” ಎಂದು ಭರವಸೆ ನೀಡಿದರು.
ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji), ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ (VISHWA VOKKALIGARA MAHASAMSTHANA MATHA)ದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಸಚಿವರಾದ ಆರ್. ಅಶೋಕ (R. Ashoka), ಡಾ.ಸಿ.ಎನ್. ಅಶ್ವತ್ಥನಾರಾಯಣ (Dr. Ashwathnarayan C. N.), ವಿ. ಸುನಿಲ್‌ಕುಮಾರ್, ಕೆ. ಗೋಪಾಲಯ್ಯ, ಮುನಿರತ್ನ, ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಕೃಷ್ಣಪ್ಪ, ಸಂಸದ ತೇಜಸ್ವಿ ಸೂರ್ಯ (Tejasvi Surya), ರಾಜ್ಯಸಭಾ ಸದಸ್ಯ ಜಗ್ಗೇಶ್ (Jaggesh), ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ವಿರೋಧ ಪಕ್ಷದ ಉಪ ನಾಯಕ ಕೆ. ಗೋವಿಂದರಾಜು ಭಾಗವಹಿಸಿದರು.