KGF : ಕೆಜಿಎಫ್ ನಗರದ ಮಾರಿಕುಪ್ಪಂನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ಕೆಜಿಎಫ್, ವಕೀಲರ ಸಂಘದ ಸಹಯೋಗದಲ್ಲಿ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ (National Nutrition Week) ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ವಿನೋದ ಕುಮಾರ್ ಮಾತನಾಡಿ “ಮಹಿಳೆಯರ ಆರೋಗ್ಯ ಮತ್ತು ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರಗಳ ಅಗತ್ಯವಿದೆ. ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹವನ್ನು ಎನ್‌ಬಿಎಂ ಪ್ಲಾನಿಟೇಷನ್ ಏರಿಯಾ ಪೌಷ್ಟಿಕ ಆಹಾರ ಕುರಿತು ಜಾಗೃತಿ ಮೂಡಿಸಲು ಪ್ರತಿ ವರ್ಷ ಸೆಪ್ಟೆಂಬರ್ ಮೊದಲ ವಾರ (1 ರಿಂದ 7ರವರೆಗೆ) ಆಚರಿಸಲಾಗುತ್ತದೆ. ಆರೋಗ್ಯಕರ ಜೀವನಶೈಲಿ ಪಾಲಿಸಲು ಪ್ರತಿಯೊಬ್ಬರು ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಬೇಕು” ಎಂದು ತಿಳಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಜೇಶ್ ಎಸ್.ಟಿ, ನ್ಯಾಯಾಧೀಶ ಗಣಪತಿ ಗುರುಸಿದ್ಧ ಬಾದಾಮಿ, ಶೆಮಿದ, ವಕೀಲರ ಸಂಘ ಅಧ್ಯಕ್ಷ ಎಸ್.ಎನ್. ರಾಜಗೋಪಾಲ ಗೌಡ, ಉಪಾಧ್ಯಕ್ಷ ಬಿ. ಮಣಿವಣ್ಣನ್, ಕಾರ್ಯದರ್ಶಿ ಕೆ. ಸಿ. ನಾಗರಾಜ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
For Daily Updates WhatsApp ‘HI’ to 7406303366
The post ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.