Bengaluru : ಅಂತರರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ದಿನದ (International Childhood Cancer Day) ಅಂಗವಾಗಿ ಸಂಸ್ಥೆಯಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ (KIDWAI MEMORIAL INSTITUTE OF ONCOLOGY) ಮಂಗಳವಾರ Bone Marrow ಕಸಿ ಶಸ್ತ್ರಚಿಕಿತ್ಸೆಗೆ ಚಾಲನೆ ದೊರೆತಿದೆ.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮತ್ತು ದಾನಿ ರಾಜಶೇಖರ್ ಅವರು ₹4 ಕೋಟಿ ವೆಚ್ಚದಲ್ಲಿ ನಿರ್ಮಿಸಿಕೊಡುತ್ತಿರುವ ವೈದ್ಯಕೀಯ ICU ಘಟಕದ ಭೂಮಿ ಪೂಜೆ ನೆರವೇರಿಸಿ ಮಾತಾನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ “ಬೋನ್ ಮ್ಯಾರೊ ಚಿಕಿತ್ಸಾ ಘಟಕವು 17 ಹಾಸಿಗೆಗಳನ್ನು ಒಳಗೊಂಡಿದ್ದು, ವೈದ್ಯರು ಹಾಗೂ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದೆ. ಕ್ಯಾನ್ಸರ್ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಅಗತ್ಯವಿದ್ದು ಈ ಘಟಕದ ಮೂಲಕ ಕ್ಯಾನ್ಸರ್ ಕಾಯಿಲೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿನ (BPL) ಕುಟುಂಬದವರಿಗೆ ಬೋನ್ ಮ್ಯಾರೊ ಕಸಿ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಒದಗಿಸಲಾಗುತ್ತದೆ ಮತ್ತು ರಿಯಾಯಿತಿ ದರದಲ್ಲಿ BPL ಕಾರ್ಡ್ ಇಲ್ಲದವರಿಗೆ ಈ ಕಸಿಯನ್ನು ಮಾಡಲಾಗುವುದು. ರಾಜ್ಯದ ವಿವಿಧಡೆಯಿಂದ ರೋಗಿಗಳು ಕಿದ್ವಾಯಿ ಸಂಸ್ಥೆಗೆ ಬರುತ್ತಿದ್ದು ಈ ಸಂಸ್ಥೆಯ ಮೇಲೆ ಒತ್ತಡ ಹೆಚ್ಚಿದೆ. ಇದನ್ನು ಕಡಿಮೆ ಮಾಡಲು ಸರ್ಕಾರವು ಕಿದ್ವಾಯಿ ಪ್ರಾದೇಶಿಕ ಕೇಂದ್ರಗಳನ್ನು ಸ್ಥಾಪನೆ ಮಾಡುತ್ತಿದೆ. ಈಗಾಗಲೇ ತುಮಕೂರು, ಕಲಬುರಗಿ, ಶಿವಮೊಗ್ಗ ಮತ್ತು ಮೈಸೂರಿನಲ್ಲಿ ಸಂಸ್ಥೆಯ ಪ್ರಾದೇಶಿಕ ಕೇಂದ್ರಗಳಿದ್ದು ಈ ವರ್ಷ ಬೆಳಗಾವಿ ಯಲ್ಲೂ ಆರಂಭವಾಗಲಿದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ.ಸಿ. ರಾಮಚಂದ್ರ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.