Kolar, Chikkaballapur : ಅವಿಭಜಿತ ಕೋಲಾರ ಜಿಲ್ಲೆಯ ಹಾಲು ಉತ್ಪಾದಕರಿಗೆ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು (KOCHIMUL) ಹಾಲು ಖರೀದಿ ದರವನ್ನು ಲೀಟರ್‌ಗೆ ₹ 3 ಹೆಚ್ಚಿಸಿದೆ (Milk Price Hike). ಪ್ರಸ್ತುತ ಹಾಲು ಖರೀದಿ ದರ ಲೀಟರ್‌ಗೆ ₹24 ಇದ್ದು ದರ ಹೆಚ್ಚಳದ ನಂತರ ಪರಿಷ್ಕೃತ ದರ ಲೀಟರ್‌ಗೆ ₹27ಕ್ಕೆ ಏರಿಕೆಯಾಗಿದೆ. ಏಪ್ರಿಲ್ 1 ಶುಕ್ರವಾರದಿಂದ ಹೊಸ ದರ ಜಾರಿಗೆ ಬರಲಿದ್ದು ಇದರ ಜತೆಗೆ ಪ್ರೋತ್ಸಾಹಧನ ವಾಗಿ ಸರ್ಕಾರ ಲೀಟರ್‌ಗೆ ₹ 5 ಕೊಡುತ್ತದೆ.
ಕೋವಿಡ್ ಮತ್ತು ಲಾಕ್‌ಡೌನ್ ಕಾರಣಕ್ಕೆ ಹಾಲು ಹಾಗೂ ಹಾಲಿನ ಉತ್ಪನ್ನಗಳ ಮಾರಾಟ ಪ್ರಮಾಣ ಕಳೆದ ವರ್ಷ ಗಣನೀಯವಾಗಿ ಕುಸಿದಿತ್ತು. ಲಾಕ್‌ಡೌನ್ ನಿಂದ ಸರಕು ಸಾಗಣೆ ಸೇವೆಯಲ್ಲಿ ವ್ಯತ್ಯಯವಾಗಿ ಹೊರ ರಾಜ್ಯ ಮತ್ತು ಜಿಲ್ಲೆಗಳಿಗೆ ಹಾಲು ಪೂರೈಕೆ ಸ್ಥಗಿತ ಗೊಂಡಿದ್ದು ಜಾಗತಿಕವಾಗಿ ಹಾಲಿನ ಪುಡಿ, ಬೆಣ್ಣೆ ಬೆಲೆಯು ದಾಖಲೆ ಪ್ರಮಾಣದಲ್ಲಿ ಕುಸಿದು ಮಾರುಕಟ್ಟೆಯಲ್ಲಿ ಬೇಡಿಕೆ ಇಲ್ಲವಾಗಿತ್ತು. ಹಾಲಿನ ಪುಡಿ ಮತ್ತು ಬೆಣ್ಣೆಯು ಗೋದಾಮುಗಳಲ್ಲೇ ಉಳಿದು ಒಕ್ಕೂಟಕ್ಕೆ ನಷ್ಟದ ಭೀತಿ ಎದುರಾಗಿತ್ತು.