back to top
24 C
Bengaluru
Friday, July 25, 2025
HomeKarnatakaKolarಕೋಲಾರ: ಪ್ರತಿಭಾ ಕಾರಂಜಿಯಲ್ಲಿ 44 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕೋಲಾರ: ಪ್ರತಿಭಾ ಕಾರಂಜಿಯಲ್ಲಿ 44 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

- Advertisement -
- Advertisement -

Kolar : ಕೋಲಾರ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ 44 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಡೆದ ಸ್ಪರ್ಧೆಗಳಲ್ಲಿ 292 ವಿದ್ಯಾರ್ಥಿಗಳು ಭಾಗವಹಿಸಿ 39 ವಿಭಿನ್ನ ಸ್ಪರ್ಧಾ ಪ್ರಕಾರಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ಗಜಲ್‌, ಕವಾಲಿ, ಜನಪದ ಗೀತೆ, ಚಿತ್ರಕಲೆ, ರಸಪ್ರಶ್ನೆ, ಭಾಷಣ, ರಂಗೋಲಿ, ಛದ್ಮವೇಶ ಮತ್ತು ಹನಿಗವನದಂತಹ ಸ್ಪರ್ಧೆಗಳಲ್ಲಿ ಮಕ್ಕಳ ಪ್ರತಿಭೆ ಮೆರೆದಿತ್ತು.

ಜಿಲ್ಲಾಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳನ್ನು 101 ತೀರ್ಪುಗಾರರು ಆಯ್ಕೆಮಾಡಿದರು. ಪ್ರಥಮ, ದ್ವಿತೀಯ, ಮತ್ತು ತೃತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಗಣ್ಯರು ಪ್ರಶಸ್ತಿ ವಿತರಿಸಿದರು.

ಶಿಕ್ಷಕರು ಕಲಿಕೆಗೆ ಪೂರಕವಾದ ನೈಪುಣ್ಯಗಳನ್ನು ಕಲಿಸಬೇಕು

ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳಿಗೆ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಮುನ್ನಡೆಸಲು ಶಿಕ್ಷಕರು ಕಲಿಕೆಗೆ ಪೂರಕವಾದ ನೈಪುಣ್ಯಗಳನ್ನು ಕಲಿಸಬೇಕು ಎಂದು ಸಲಹೆ ನೀಡಿದರು. ಅವರು, ರಾಜ್ಯಮಟ್ಟದಲ್ಲಿ ಮಕ್ಕಳ ಸಾಧನೆ ಜಿಲ್ಲೆಯ ಕೀರ್ತಿಗೆ ಕಾರಣವಾಗಬೇಕು ಎಂದು ಆಶಿಸಿದರು.

ಜಿಲ್ಲಾಧಿಕಾರಿ ಅಕ್ರಂ ಪಾಷಾ, ಸಂವಿಧಾನದ ಮಹತ್ವವನ್ನು ನೆನಪಿಸುತ್ತಾ, ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆಯಾಗಿದ್ದು, ಕಲೆ ಮತ್ತು ಸಂಸ್ಕೃತಿಯ ಚಟುವಟಿಕೆಗಳು ಸಮಗ್ರ ಶಿಕ್ಷಣದ ಭಾಗವಾಗಬೇಕು ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ, ಈ ವರ್ಷ 39 ವಿಭಿನ್ನ ಸ್ಪರ್ಧಾ ವಿಭಾಗಗಳು ಸೇರಿದ್ದು, ಪಟ್ಟಣದಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾಮಟ್ಟದಲ್ಲಿ ತಮ್ಮ ಪ್ರತಿಭೆ ತೋರಿಸಲು ಅವಕಾಶ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ, ಸಂವಿಧಾನ ದಿನಾಚರಣೆಯ ಅಂಗವಾಗಿ ಡಿಡಿಪಿಐ ಕೃಷ್ಣಮೂರ್ತಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ಕಾರ್ಯಕ್ರಮದಲ್ಲಿ ರೂಪ್ಸಾ ಉಪಾಧ್ಯಕ್ಷ ಎಸ್. ಮುನಿಯಪ್ಪ, ಜಿಲ್ಲಾ ಶಿಕ್ಷಣಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು, ಮತ್ತು ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page