back to top
27 C
Bengaluru
Sunday, August 31, 2025
HomeKarnatakaKolarಸಂಸದ D.K. ಸುರೇಶ್ ವಿರುದ್ಧ BJP ಕಾರ್ಯಕರ್ತರ ಪ್ರತಿಭಟನೆ

ಸಂಸದ D.K. ಸುರೇಶ್ ವಿರುದ್ಧ BJP ಕಾರ್ಯಕರ್ತರ ಪ್ರತಿಭಟನೆ

- Advertisement -
- Advertisement -

Kolar : ರಾಮನಗರದಲ್ಲಿ ಸೋಮವಾರ ನಡೆದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಭಾಷಣಕ್ಕೆ ಅಡ್ಡಿಪಡಿಸಿ ಸಂಸದ ಡಿ.ಕೆ. ಸುರೇಶ್ (D.K. Suresh) ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿ BJP ಕಾರ್ಯಕರ್ತರು ಕೋಲಾರ ನಗರದ KSRTC ಬಸ್‌ ನಿಲ್ದಾಣ ವೃತ್ತದಲ್ಲಿ ಡಿ.ಕೆ.ಸುರೇಶ್‌ರ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D. K. Shivakumar) ಮತ್ತು Congress ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಎದುರು ರಾಜ್ಯದಲ್ಲಿ ಕಾಂಗ್ರೆಸ್‌ನ ಒಬ್ಬರೇ ಸಂಸದರಾದ ಸುರೇಶ್ ಮತ್ತು ವಿಧಾನ ಪರಿಷತ್‌ ಸದಸ್ಯ ರವಿಕುಮಾರ್ ನಡೆದುಕೊಂಡ ರೀತಿ ಖಂಡನೀಯ. ಡಿ.ಕೆ.ಶಿವಕುಮಾರ್‌ ಸಹೋದರರು ರಾಮನಗರದಲ್ಲಿ ಹಣ ಬಲದಿಂದ ರಾಜಕಾರಣ ಮಾಡುತ್ತಿರುವುದಕ್ಕೆ ಇದು ಸ್ಪಷ್ಟ ಉದಾಹರಣೆ ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವೇಣುಗೋಪಾಲ್‌ ಕಿಡಿಕಾರಿದರು.

ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಸಮನ್ವಯ ಸದಸ್ಯ ವಿಜಿಕುಮಾರ್‌, ಯುವ ಮೋರ್ಚಾ ಅಧ್ಯಕ್ಷ ಬಾಲಾಜಿ, ವಕ್ತಾರ ಎಸ್.ಬಿ.ಮುನಿವೆಂಕಟಪ್ಪ, ನಗರ ಘಟಕದ ಅಧ್ಯಕ್ಷ ತಿಮ್ಮರಾಯಪ್ಪ ಹಾಗೂ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಕೆಜಿಎಫ್

Kolar Gold Fields (K.G.F.) : ಕೆಜಿಎಫ್ ನ ರಾಬರ್ಟ್‌ಸನ್‌ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ವಿರುದ್ಧ ಪ್ರತಿಭಟನೆ ನಡೆಸಿದರು

ಬಂಗಾರಪೇಟೆ

Bangarpet : ಬಂಗಾರಪೇಟೆ ತಾಲ್ಲೂಕು ಕಚೇರಿ ಮುಂದೆ ಬಿಜೆಪಿ ಮುಖಂಡರು ಸಂಸದ ಡಿ.ಕೆ.ಸುರೇಶ್ ಗೂಂಡಾಗಿರಿ ಖಂಡಿಸಿ ಪ್ರತಿಭಟಿಸಿದರು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page