Kolar : ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ “ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಮಳೆ ಪರಿಣಾಮದಿಂದ 80% ಮಾವು ಬೆಳೆ (Mango Crop Loss) ನಾಶವಾಗಿದ್ದು, ಈ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು. ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿರುವ 411 ಅಂಗನವಾಡಿ ಕೇಂದ್ರಗಳಿಗೆ ಮುಂದಿನ ದಿನಗಳಲ್ಲಿ ಸರ್ಕಾರಿ ಕಟ್ಟಡಗಳನ್ನು ಒದಗಿಸುವ ಬಗ್ಗೆ ಒತ್ತು ನೀಡಲಾಗುವುದು. ಸ್ಮಶಾನಕ್ಕೆ ಒದಗಿಸಲಾಗಿರುವ ಅನುದಾನವನ್ನು ಬೇರೆ ಯಾವುದೇ ಯೋಜನೆಗಳಿಗೆ ಉಪಯೋಗಸಬಾರದು. ರೈತರ ಜೀವನಕ್ಕೆ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿ, ಶಾಸಕರಾದ ರಮೇಶ್ ಕುಮಾರ್, ಎಸ್.ಎನ್.ನಾರಾಯಣಸ್ವಾಮಿ, ಎಚ್.ನಾಗೇಶ್, ಕೆ.ಶ್ರೀನಿವಾಸಗೌಡ, ರೂಪಕಲಾ, ಕೆ.ವೈ.ನಂಜೇಗೌಡ, ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್‍ಕುಮಾರ್, ಸಂಸದ ಎಸ್.ಮುನಿಸ್ವಾಮಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯುಕೇಶ್ ಕುಮಾರ್, ಉಪ ಕಾರ್ಯದರ್ಶಿ ಸಂಜೀವಪ್ಪ ಉಪಸ್ಥಿತರಿದ್ದರು.