Home Karnataka Chikkaballapura ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿ ಕೊಲೆ ಖಂಡಿಸಿ ಪ್ರತಿಭಟನೆ

ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿ ಕೊಲೆ ಖಂಡಿಸಿ ಪ್ರತಿಭಟನೆ

Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಕರ್ನಾಟಕ ವಿಕಲಚೇತನ ಒಕ್ಕೂಟದಿಂದ ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಕೊಲೆ (Kolkata Doctor Murder) ಮಾಡಿರುವ ಪ್ರಕರಣ ಖಂಡಿಸಿ ಪ್ರತಿಭಟನೆ (Protest) ನಡೆಸಲಾಯಿತು.

ಈ ಸಂಧರ್ಭದಲ್ಲಿ ಮಾತನಾಡಿದ ಪ್ರತಿಭಟನಕಾರರು ಹೆಣ್ಣು ಮಕ್ಕಳನ್ನು ಗೌರವಿಸಬೇಕು, ಪೂಜಿಸಬೇಕು ಎನ್ನುವ ಮಾತುಗಳು ಭಾಷಣಗಳಿಗೆ ಸೀಮಿತವಾಗಿದ್ದು, ಇಂತಹ ಪ್ರಕರಣಗಳು ಆಗಾಗ್ಗೆ ನಡೆಯುತ್ತಲೇ ಇವೆ. ಹೆಣ್ಣು ಮಕ್ಕಳ ಮೇಲೆ ಅವ್ಯಾಹತವಾಗಿ ದೌರ್ಜನ್ಯಗಳು ನಡೆಯುತ್ತಲೇ ಇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ, ಕಿರಣ್ ನಾಯಕ್, ರವಿಕುಮಾರ್, ಜಯಂತಿ, ಕಾವ್ಯ, ಮಂಜುನಾಥ್, ಕೃಷ್ಣ, ಚಂದ್ರಶೇಖರ್, ಸುನೀಲ್, ನಾರಾಯಣಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

The post ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿ ಕೊಲೆ ಖಂಡಿಸಿ ಪ್ರತಿಭಟನೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version