
Chikkaballapur : ಬುಧವಾರ ಲೋಕಾಯುಕ್ತ (Lokayukta) ಅಧಿಕಾರಿಗಳು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ ಚಿಕ್ಕಬಳ್ಳಾಪುರದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ (KRIDL) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸದಾಶಿವಯ್ಯ ಅವರ ನಿವಾಸಗಳ ಮೇಲೆ ದಾಳಿ (Raid) ನಡೆಸಿದರು.
ಸದಾಶಿವಯ್ಯ ಅವರ ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ ₹ 1.50 ಕೋಟಿ ಆಗಿದ್ದು ಇದರಲ್ಲಿ ಮೂರು ಮನೆಗಳು, ₹ 80 ಸಾವಿರ ನಗದು, ₹ 20 ಲಕ್ಷ ಮೌಲ್ಯದ ಚಿನ್ನಾಭರಣ, ₹ 8.50 ಲಕ್ಷ ಮೌಲ್ಯದ ವಾಹನಗಳು, ₹ 24.70 ಲಕ್ಷ ಮೌಲ್ಯದ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು ಸೇರಿ ₹ 54 ಲಕ್ಷ ಮೌಲ್ಯದ ವಸ್ತುಗಳು ಸೇರಿವೆ ಎಂದು ಲೋಕಾಯುಕ್ತರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್‌ಪಿ ರಾಮ್ ಎಲ್.ಅರಸಿದ್ದಿ, ಡಿವೈಎಸ್‌ಪಿ ವೀರೇಂದ್ರ ಕುಮಾರ್, ಮೋಹನ್, ಶಿವಪ್ರಸಾದ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
The post KRIDL ಎಂಜಿನಿಯರ್ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ appeared first on Chikkaballapur | ಚಿಕ್ಕಬಳ್ಳಾಪುರ.