back to top
24.4 C
Bengaluru
Thursday, October 9, 2025
HomeKarnatakaHD Deve Gowda ಕುರಿತ ಡಿಕೆ ಸುರೇಶ್ ಹೇಳಿಕೆಗೆ Kumaraswamy ತಿರುಗೇಟು

HD Deve Gowda ಕುರಿತ ಡಿಕೆ ಸುರೇಶ್ ಹೇಳಿಕೆಗೆ Kumaraswamy ತಿರುಗೇಟು

- Advertisement -
- Advertisement -

Bengaluru: ಮಾಜಿ ಪ್ರಧಾನಿ HD ದೇವೇಗೌಡರು (former Prime Minister HD Deve Gowda) ಆಂಬ್ಯುಲೆನ್ಸ್​ನಲ್ಲಿ ಪ್ರಚಾರಕ್ಕೆ (campaigning in an ambulance) ಬರಲಿದ್ದಾರೆ, ಬರಲಿ ಎಂಬ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ (DK Suresh) ಹೇಳಿಕೆಗೆ ಕೇಂದ್ರ ಸಚಿವ HD ಕುಮಾರಸ್ವಾಮಿ (Union Minister HD Kumaraswamy) ಚನ್ನಪಟ್ಟಣ ಉಪಚುನಾವಣೆ ಪ್ರಚಾರಕ್ಕೆ ಹೊರಡುವುದಕ್ಕೂ ಮುನ್ನ ತಿರುಗೇಟು ನೀಡಿದರು.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಆರೋಗ್ಯದ ಬಗ್ಗೆ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ನೀಡಿರುವ ಹೇಳಿಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಕೆರಳಿಸಿದೆ.

ಡಿಕೆ ಸುರೇಶ್ ನೀಡಿರುವ ಹೇಳಿಕೆಗೆ ಬೆಂಗಳೂರಿನಲ್ಲಿ ತಿರುಗೇಟು ನೀಡಿದ ಅವರು, ದೇವೇಗೌಡರ ಆರೋಗ್ಯದ ಬಗ್ಗೆ ಕೇವಲವಾಗಿ ಮಾತನಾಡುತ್ತಿದ್ದಾರೆ. ಎಂಸಿ ಅಶ್ವತ್ಥ್ ಕೊಟ್ಟ ಹೇಳಿಕೆಯನ್ನೇ ಡಿಕೆ ಸುರೇಶ್ ಹೇಳಿದ್ದಾರೆ.

ಇದೇ ಅಶ್ವತ್ಥ್ ಪರ ಹಿಂದೆ ದೇವೇಗೌಡರು ಹಳ್ಳಿ ಹಳ್ಳಿಗೆ‌ ಪ್ರಚಾರಕ್ಕೆ ಬಂದಿರಲಿಲ್ವಾ ಆಗ ವ್ಯಾಮೋಹಕ್ಕೆ‌ ಬಿದ್ದು ದೇವೇಗೌಡರು ಪ್ರಚಾರಕ್ಕೆ ಬಂದಿದ್ದರಾ ಎಂದು ಪ್ರಶ್ನಿಸಿದರು.

ದೇವೇಗೌಡರು ಬರುತ್ತಿರುವುದು ಮೊಮ್ಮಗನ ಪಟ್ಟಾಭಿಷೇಕಕ್ಕೆ ಎನ್ನುತ್ತಿದ್ದಾರೆ. ಅಶ್ವತ್ಥ್ ಗೆಲ್ಲಿಸಲು ಅವತ್ತು ದೇವೇಗೌಡರು‌ ಹೋಗಿರಲಿಲ್ವಾ? ಅವತ್ತು ಯಾರಿಗೋಸ್ಕರ ದೇವೇಗೌಡರು ಹೋಗಿದ್ದರು? ಈ ರೀತಿಯ ಸಣ್ಣತನದ ಮಾತಿಗೆ ಕಾಲವೇ ಉತ್ತರ ಕೊಡುತ್ತದೆ ಎಂದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page