Chikkaballapur : ಚಿಕ್ಕಬಳ್ಳಾಪುರ ನಗರದ ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆಗಳ 28ನೇ ದತ್ತಿ ದಿನಾಚರಣೆ ಮತ್ತು ಮಾಜಿ ಶಾಸಕ ಸಿ.ವಿ.ವೆಂಕಟರಾಯಪ್ಪ ಅವರ 109ನೇ ಜಯಂತಿಯನ್ನು ನಗರದ ಹೊರವಲಯದ ಕೆ.ವಿ ಕ್ಯಾಂಪಸ್‌ನಲ್ಲಿ (KV Trust Datti Day) ಅದ್ಧೂರಿಯಾಗಿ ನಡೆಸಲಾಯಿತು. ಕಳೆದ ಒಂದು ತಿಂಗಳಿನಿಂದ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಿವಿಧ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ಮತ್ತು ಸಂಸ್ಥೆಯ ನಿವೃತ್ತ ನೌಕರರಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕೆ.ವಿ.ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ವಿ.ನವೀನ್‌ಕಿರಣ್ ” ದತ್ತಿ ದಿನಾಚರಣೆಗಾಗಿ ಮತ್ತು ಸಿವಿವಿ ಜನ್ಮದಿನಾಚರಣೆಗೆ ನಮ್ಮ ಸಂಸ್ಥೆ ಸಿಬ್ಬಂದಿ ಶ್ರಮಿಸಿದ್ದಾರೆ. ಇದರ ಫಲವಾಗಿ ಈ ಕಾರ್ಯಕ್ರಮವನ್ನು ಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದೇವೆ. ಈ ಬಾರಿ ಸಂಸ್ಥೆಯಿಂದ ನಡೆದ ರಕ್ತದಾನ ಶಿಬಿರದಲ್ಲಿ 2,148 ಯುನಿಟ್ ಸಂಗ್ರಹಿಸಲಾಗಿದ್ದು ಮುಂದಿನ ವರ್ಷ ನಾಲ್ಕು ಸಾವಿರ ಯುನಿಟ್ ರಕ್ತ ಸಂಗ್ರಹಿಸುವ ಗುರಿ ಹೊಂದಿದ್ದೇವೆ” ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ರಾಜ್ಯ ಕೊಕ್ಕೊ ಅಸೋಸಿಯೇಷನ್ ಅಧ್ಯಕ್ಷ ಲೋಕೇಶ್ವರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೇಶವರೆಡ್ಡಿ, ಮುಖಂಡರಾದ ಕೆ.ವಿ.ನಾಗರಾಜ್, ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಶಿವರಾಮರೆಡ್ಡಿ, ಕೆ.ವಿ.ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪಿ.ಸಾಯಿಪ್ರಭು, ದತ್ತಿ ಸದಸ್ಯರಾದ ಬಿ.ಮುನಿಯಪ್ಪ, ಗೀತಾ, ನಿರ್ಮಲಾ ಪ್ರಭು ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
For Daily Updates WhatsApp ‘HI’ to 7406303366
The post K V ಶಿಕ್ಷಣ ಸಂಸ್ಥೆ : 28ನೇ ದತ್ತಿ ದಿನಾಚರಣೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.