
Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಲೋಕಸಭಾ ಚುನಾವಣಾ (Lokasabha Election) ಮನೆ ಮತದಾನಕ್ಕೆ ನಿಯೋಜನೆ ಆಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ (Polling Officers Training) ಕಾರ್ಯಕ್ರಮ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ “ಏಪ್ರಿಲ್ 13 ರಿಂದ 18ರವರೆಗೆ ಜಿಲ್ಲೆಯಾದ್ಯಂತ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ಅರ್ಹ ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆಯು ನಡೆಯಲಿದೆ. ಚುನಾವಣಾ ಆಯೋಗ ನೀಡಿರುವ ಸೂಚನೆಗಳ ಅನ್ವಯ ನಿಗದಿತ ಕಾಲಾವಧಿಯಲ್ಲಿ ಯಾವುದೇ ಲೋಪಕ್ಕೆ ಅವಕಾಶ ಕೊಡದೆ ಚುನಾವಣಾ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಇದಕ್ಕೆ ಸಹಕಾರಿಯಾಗುವಂತೆ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯಲ್ಲಿ ಯಾವುದೇ ಗೊಂದಲಗಳಿದ್ದರೂ ಪರಿಹರಿಸಿಕೊಳ್ಳಬಹುದು” ಎಂದು ಹೇಳಿದರು.
ಹೆಚ್ಚುವರಿ ಚುನಾವಣಾಧಿಕಾರಿ ಎನ್. ತಿಪ್ಪೇಸ್ವಾಮಿ, ಮತದಾನಕ್ಕೆ ನಿಯೋಜನೆ ಆಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
The post ಹಿರಿಯ ನಾಗರಿಕರು, ಅಂಗವಿಕಲರಿಗೆ April 13 ರಿಂದ ಮನೆಯಿಂದ ಮತದಾನ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.