
IPL 40ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಎದುರಿಸುತ್ತಿವೆ. ಈ ಪಂದ್ಯವು ಉತ್ತರ ಪ್ರದೇಶದ ಲಕ್ನೋದ ಏಕಾನಾ ಮೈದಾನದಲ್ಲಿ ನಡೆಯಲಿದೆ.
ಲಕ್ನೋ ಸೂಪರ್ ಜೈಂಟ್ಸ್ (LSG): ಈ ಋತುವಿನಲ್ಲಿ ರಿಷಭ್ ಪಂತ್ ನೇತೃತ್ವದ ಲಕ್ನೋ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. 8 ಪಂದ್ಯಗಳಲ್ಲಿ 5 ಗೆಲುವು ಮತ್ತು 3 ಸೋಲು ಕಂಡಿದೆ. ಕೊನೆಯ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 2 ರನ್ ಗಳಿಂದ ಜಯ ಹೊಂದಿದೆ. ಪ್ರಸ್ತುತ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್ (DC): ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ತಂಡ ಈ ಋತುವಿನಲ್ಲಿ ಉತ್ತಮ ಫಾರ್ಮ್‌ನಲ್ಲಿ ಇದೆ. 8 ಪಂದ್ಯಗಳಲ್ಲಿ 5 ಗೆಲುವು ಮತ್ತು 2 ಸೋಲು ಕಂಡಿದೆ. ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ 7 ವಿಕೆಟ್ ಗಳಿಂದ ಸೋಲು ಅನುಭವಿಸಿತ್ತು. ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಕನ್ನಡಿಗ ಕೆ.ಎಲ್.ರಾಹುಲ್ ಅವರ ಮೇಲೆ ಎಲ್ಲರ ಕಣ್ಣು ಇದೆ.
ಇವತ್ತಿಗೆ ಈ 2 ತಂಡಗಳು 6 ಬಾರಿ ಎದುರಿಸಿವೆ. ಎರಡೂ ತಂಡಗಳು 3-3 ಬಾರಿ ಜಯಗಳಿಸಿವೆ.
ಗರಿಷ್ಠ-ಕನಿಷ್ಠ ಸ್ಕೋರ್
- ಡೆಲ್ಲಿ ಕ್ಯಾಪಿಟಲ್ಸ್ (LSG ವಿರುದ್ಧ): ಗರಿಷ್ಠ 211 ರನ್, ಕನಿಷ್ಠ 143 ರನ್.
- ಲಕ್ನೋ ಸೂಪರ್ ಜೈಂಟ್ಸ್ (DC ವಿರುದ್ಧ): ಗರಿಷ್ಠ 209 ರನ್, ಕನಿಷ್ಠ 167 ರನ್.
ಡೆಲ್ಲಿ ಕ್ಯಾಪಿಟಲ್ಸ್: ಅಭಿಷೇಕ್ ಪೊರೆಲ್, ಕರುಣ್ ನಾಯರ್, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಮೋಹಿತ್ ಶರ್ಮಾ, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.
ಲಕ್ನೋ ಸೂಪರ್ ಜೈಂಟ್ಸ್: ಐಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ನಿಕೋಲಸ್ ಪೂರನ್, ರಿಷಭ್ ಪಂತ್ (ನಾಯಕ & ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಅಬ್ದುಲ್ ಸಮದ್, ರವಿ ಬಿಷ್ಣೋಯ್, ಶಾರ್ದೂಲ್ ಠಾಕೂರ್, ಪ್ರಿನ್ಸ್ ಯಾದವ್, ದಿಗ್ವೇಶ್ ಸಿಂಗ್ ರಾಠಿ, ಅವೇಶ್ ಖಾನ್.
ಪಂದ್ಯ ಪ್ರಾರಂಭ: ರಾತ್ರಿ 7.30ಕ್ಕೆ
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್, JioHotstar