back to top
26.6 C
Bengaluru
Tuesday, September 16, 2025
HomeNewsMaharashtra, Jharkhand ಚುನಾವಣೆಯ ದಿನಾಂಕ ಇಂದು ಪ್ರಕಟ

Maharashtra, Jharkhand ಚುನಾವಣೆಯ ದಿನಾಂಕ ಇಂದು ಪ್ರಕಟ

- Advertisement -
- Advertisement -

Delhi: ಇಂದು (ಮಂಗಳವಾರ) ಮಧ್ಯಾಹ್ನ 3.30 ಕ್ಕೆ ಮಹಾರಾಷ್ಟ್ರ (Maharashtra) ಮತ್ತು ಜಾರ್ಖಂಡ್ (Jharkhand) ವಿಧಾನಸಭಾ ಚುನಾವಣೆಗಳ (assembly election) ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (The Election Commission of India-ECI) ಪ್ರಕಟಿಸಲಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯು 2025ರ ಜನವರಿ 5ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಿಂದ ಕೂಡಿದ ಆಡಳಿತಾರೂಢ ಮಹಾಯುತಿ ಒಕ್ಕೂಟವು ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ NCP ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ವಿರುದ್ಧ ಸ್ಪರ್ಧಿಸಲಿದೆ.

ಜಾರ್ಖಂಡ್‌ನಲ್ಲಿ, ಇಂಡಿಯಾ ಬ್ಲಾಕ್‌ನ ಭಾಗವಾಗಿರುವ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (JMM), ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ (AJSU), ಜನತಾ ದಳ (ಯುನೈಟೆಡ್) ಮತ್ತು ಬಿಜೆಪಿಯನ್ನು ಒಳಗೊಂಡಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (AND) ವಿರುದ್ಧ ಸ್ಪರ್ಧಿಸಲಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page