Maharastra : Covid-19 ಮತ್ತು ಓಮಿಕ್ರಾನ್ ರೂಪಾಂತರದ (Omicron Variant) ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಯಲು ಮಹಾರಾಷ್ಟ್ರ ಸರ್ಕಾರ (Government of Maharastra) ಶುಕ್ರವಾರ ಮಧ್ಯರಾತ್ರಿಯಿಂದ ರಾಜ್ಯಾದ್ಯಂತ ರಾತ್ರಿ ವೇಳೆಯ ನಿರ್ಬಂಧ (Night Curfew) ವಿಧಿಸಿದೆ. ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯಲ್ಲಿ ರಾತ್ರಿ 9 ರಿಂದ ಬೆಳಿಗ್ಗೆ 6 ರವರೆಗೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಐದಕ್ಕಿಂತ ಹೆಚ್ಚು ಜನರ ಸಭೆ ಸೇರುವುದನ್ನು ನಿರ್ಬಂಧಿಸಲಾಗಿದೆ.
ವೇಗವಾಗಿ ಹರಡುತ್ತಿರುವ ಕೋವಿಡ್-19 ಓಮಿಕ್ರಾನ್ ರೂಪಾಂತರಿ ವೈರ್ಸ್ ಪ್ರಪಂಚದಾದ್ಯಂತ 110 ದೇಶಗಳಿಗೆ ಕಂಡುಬಂದಿದೆ. ವೈರಸ್ ಹರಡುವಿಕೆಯ ಪ್ರಮಾಣ ಹೆಚ್ಚಾಗಿರುವುದರಿಂದ ಪ್ರಸ್ತುತ ಕೆಲವು ನಿರ್ಬಂಧಗಳನ್ನು ವಿಧಿಸಲಾಗುತ್ತಿದ್ದು, ಭವಿಷ್ಯದಲ್ಲಿ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ನಿರ್ಬಂಧಗಳು ಹೇರುವುದನ್ನು ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Chief Minister Uddhav Thackeray) ಹೇಳಿದ್ದಾರೆ. ಜನರು ಮುಖಗವಸುಗಳನ್ನು ತೊಡುವುದು, ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸುವುದು ಸೇರಿದಂತೆ ಸೋಂಕು ಹರಡದಂತೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿಗಳು ಕರೆ ನೀಡಿದ್ದಾರೆ.