back to top
25.6 C
Bengaluru
Saturday, January 18, 2025
HomeKarnatakaಕರ್ನಾಟಕದ 5 ಸಾಧಕರಿಗೆ Maharshi Valmiki ಪ್ರಶಸ್ತಿ

ಕರ್ನಾಟಕದ 5 ಸಾಧಕರಿಗೆ Maharshi Valmiki ಪ್ರಶಸ್ತಿ

- Advertisement -
- Advertisement -

Bengaluru: 2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ (Shri Maharshi Valmiki Award) ಅವರ ಸ್ಮರಣಾರ್ಥ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈದ ಐವರು ಸಾಧಕರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಪ್ರಕಟಿಸಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಬೆಂಗಳೂರು , ಮೈಸೂರು, ಬೆಳಗಾವಿ, ಕಲಬುರಗಿ ಕಂದಾಯ ವಿಭಾಗಗಳು ಹಾಗೂ ಬೆಂಗಳೂರು ಕೇಂದ್ರ ಸ್ಥಾನದಿಂದ ತಲಾ ಒಬ್ಬರಂತೆ ಒಟ್ಟು ಐದು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು.

ಈ ಸಾಧಕರಿಗೆ ತಲಾ 20 ಗ್ರಾಂ ಬಂಗಾರದ ಪದಕ ಹಾಗೂ 5 ಲಕ್ಷ ರೂ. ನಗದು ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ನೀಡುವ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನು ಆಯ್ಕೆ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ. ಹೆಚ್.ಮ್ಲಲೇಶಪ್ಪ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು.

ಈ ಸಮಿತಿಯು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಐವರು ಗಣ್ಯರನ್ನು ಗುರುತಿಸಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಬೆಂಗಳೂರು ವಿಭಾಗ: ಕಿಲಾರಿ ಜೋಗಯ್ಯ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನವರಾದ ಇವರು ಕಿಲಾರಿ (ಜಾನುವಾರುಗಳ ಸಂರಕ್ಷಣೆ) ವೃತ್ತಿಯ ಮೂಲಕ ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸಿದ್ದಾರೆ.

ಮೈಸೂರು ವಿಭಾಗ: ಡಾ.ರತ್ನಮ್ಮ ಎಸ್

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿಯವರಾದ ಡಾ.ರತ್ನಮ್ಮ ಎಸ್. ಅವರು ಬುಡಕಟ್ಟು ಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ್ದಾರೆ.

ಬುಡಕಟ್ಟು ಸಮುದಾಯಗಳಿರುವ ಪ್ರದೇಶಗಳಿಗೆ ಭೇಟಿ ನೀಡಿ, ಸಮುದಾಯದ ಮನವೊಲಿಸಿ ಮಕ್ಕಳಿಗೆ ಶಾಲಾ ಕಾಲೇಜುಗಳಿಗೆ ದಾಖಲಿಸುವುದು, ಸಮುದಾಯದ ಶಿಕ್ಷಣಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವ ಕಾರ್ಯ ಮಾಡಿದ್ದಾರೆ.

ಬೆಳಗಾವಿ ವಿಭಾಗ: ರಾಜಶೇಖರ ತಳವಾರ

ಬೆಳಗಾವಿಯ ಗಾಂಧಿನಗರದವರಾದ ಇವರು ಗುಡ್ಡಗಾಡು ಪ್ರದೇಶಗಳಲ್ಲಿರುವ ಬುಡಕಟ್ಟು ಸಮುದಾಯದ ಜನರಿಗೆ ಶಿಕ್ಷಣ, ಆರೋಗ್ಯ, ನೈರ್ಮಲ್ಯ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಬುಡಕಟ್ಟು ಸಮುದಾಯವು ವಾಸಿಸುವ ಮೂಲಭೂತ ಸೌಕರ್ಯಗಳಿಲ್ಲದ ಗುಡ್ಡಗಾಡು ಪ್ರದೇಶಗಳ ಬಗ್ಗೆ ವಿವಿಧ ಇಲಾಖೆಗಳ ಗಮನಕ್ಕೆ ತಂದು ಆ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ದೊರಕುವಂತೆ ಹಾಗೂ ಬುಡಕಟ್ಟು ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿದ್ದಾರೆ.

ಬೆಂಗಳೂರು ಕೇಂದ್ರ: ಕೆ.ಎಸ್.ಮೃತ್ಯುಂಜಯ

ಬೆಂಗಳೂರು ವಾಸಿಯಾದ ಕೆ.ಎಸ್.ಮೃತ್ಯುಂಜಯ ಅವರು ಪರಿಶಿಷ್ಟ ಪಂಗಡದ ಸಮುದಾಯದ ಶೈಕ್ಷಣಿಕ, ಆರ್ಥಿಕ ಆಭಿವೃದ್ಧಿ ಹಾಗೂ ಕೌಶಲ್ಯ ತರಬೇತಿ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸಮುದಾಯದವರಿಗೆ ದೊರಕಿಸಲು ಶ್ರಮಿಸಿದ್ದಾರೆ. ಸಮುದಾಯವನ್ನು ಸಂಘಟಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ.

ಕಲಬುರಗಿ ವಿಭಾಗ: ರತ್ನಮ್ಮ ಬಿ. ಸೋಗಿ

ವಿಜಯನಗರ ಜಿಲ್ಲೆ ಹರಪನಹಳ್ಳಿಯವರಾದ ಇವರು ವೃತ್ತಿ ರಂಗಭೂಮಿ ಖ್ಯಾತ ಕಲಾವಿದರಾಗಿದ್ದು, ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ರಂಗಭೂಮಿ ಕ್ಷೇತ್ರದಲ್ಲಿ ಹೆಸರಾಂತ ಕಲಾವಿದರಾಗಿದ್ದಾರೆ.

ಐತಿಹಾಸಿಕ, ಪೌರಾಣಿಕ, ಮತ್ತು ಸಾಮಾಜಿಕ ನಾಟಕಗಳಲ್ಲಿ ಅಭಿನಯಿಸುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ರಂಗಭೂಮಿ ಕ್ಷೇತ್ರದ ಉಳಿವು ಹಾಗೂ ಬೆಳವಣಿಗಾಗಿ ಅಪಾರವಾಗಿ ಶ್ರಮಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!

You cannot copy content of this page