
Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಡಿಕಲ್‌ನಲ್ಲಿ ಶಾಸಕ ಪ್ರದೀಪ್ ಈಶ್ವರ್ (Pradeep Eshwar) , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೋಳದ ಕಿಟ್ಟಿ ರಾಮಕೃಷ್ಣ ನೇತೃತ್ವದಲ್ಲಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ (Sapthagiri Hospital) ಸಹಯೋಗದಲ್ಲಿ ಭಾನುವಾರ ಉಚಿತ ಆರೋಗ್ಯ ಶಿಬಿರ (Free Health Camp) ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಜೋಳದ ಕಿಟ್ಟಿ “ಆರೋಗ್ಯದಿಂದ ಇದ್ದಲ್ಲಿ ನಾವೆಲ್ಲವನ್ನೂ ಸಾಧಿಸಬಹುದು. ಆದರೆ ಇಂದಿನ ದಿನಗಳಲ್ಲಿ ಬದಲಾದ ಜೀವನಶೈಲಿ ಮತ್ತು ಒತ್ತಡದ ಬದುಕಿನಲ್ಲಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ಕಷ್ಟಪಟ್ಟು ದುಡಿದ ಹಣ ಆಸ್ಪತ್ರೆಗೆ ಸುರಿಯುವಂತಾಗಿದೆ. ಆರೋಗ್ಯದ ವಿಚಾರವಾಗಿ ನಾವು ಎಚ್ಚರವಹಿಸಿ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ” ಎಂದು ಹೇಳಿದರು.
ಮಂಡಿಕಲ್ ಕುಪೇಂದ್ರ, ಕ್ವಾಲಿಟಿ ನಾರಾಯಣಸ್ವಾಮಿ, ಚೇತನ್ ಫಯಾಜ್, ಅಜಿತ್ ಪ್ರಸಾದ್, ಡಾ.ಮಧು ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur
The post ಶಾಸಕರ ನೇತೃತ್ವದಲ್ಲಿ ಉಚಿತ ಆರೋಗ್ಯ ಶಿಬಿರ appeared first on Chikkaballapur.