back to top
28.1 C
Bengaluru
Monday, February 16, 2026
HomeIndiaManipurಮಣಿಪುರ ಮಹಿಳೆಯರ ಮೇಲಿನ ದೌರ್ಜನ್ಯ ವೀಡಿಯೋ ಪ್ರಕರಣ: 4 ಜನರ ಬಂಧನ

ಮಣಿಪುರ ಮಹಿಳೆಯರ ಮೇಲಿನ ದೌರ್ಜನ್ಯ ವೀಡಿಯೋ ಪ್ರಕರಣ: 4 ಜನರ ಬಂಧನ

- Advertisement -
- Advertisement -

Manipur : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಪ್ರಕರಣದಲ್ಲಿ, ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಮತ್ತೊಬ್ಬ ವ್ಯಕ್ತಿ ಹುಯಿರೆಮ್ ಹೆರ್ದಾಸ್ ಸಿಂಗ್ ಅವರನ್ನು ತೌಬಲ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಹಸಿರು ಟೀ ಶರ್ಟ್ ತೊಟ್ಟ ವ್ಯಕ್ತಿಯೊಬ್ಬ ಮಹಿಳೆಯನ್ನು ಎಳೆದುಕೊಂಡು ಹೋಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ವರದಿಯಾಗಿ 70 ದಿನಗಳು ಕಳೆದರೂ ಪೊಲೀಸರು ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿರುವುದಕ್ಕೆ ಹಲವರು ಅಸಮಾಧಾನ ವ್ಯಕ್ತವಾಗಿತ್ತು.

ಮುಖ್ಯಮಂತ್ರಿ (ಸಿಎಂ) ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ನಮ್ಮ ಸಹೋದರಿಯರು ಮತ್ತು ತಾಯಂದಿರನ್ನು ಗೌರವಿಸುವ ಮತ್ತು ರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ಬಂಧನದ ನಂತರ, ಸ್ಥಳೀಯ ಮಹಿಳೆಯರು, ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬಂಧಿತ ವ್ಯಕ್ತಿಯ ಮನೆಗೆ ಬೆಂಕಿ ಹಚ್ಚಿದರು. ಈ ಘಟನೆಯ ವಿಡಿಯೋ ಕೂಡ ವ್ಯಾಪಕವಾಗಿ ಹರಿದಾಡುತ್ತಿದೆ.

ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸಿಎಂ ಹಾಗೂ ಸ್ಥಳೀಯ ಮಹಿಳೆಯರು ಆಗ್ರಹಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page