Bengaluru : ಮೇಕೆದಾಟು ಯೋಜನೆ (Mekedatu Project) ಅನುಷ್ಠಾನಕ್ಕೆ ಆಗ್ರಹಿಸಿ Congress ನಡೆಸುತ್ತಿರುವ ಪಾದಯಾತ್ರೆ ಪಾದಯಾತ್ರೆ ವಿರುದ್ಧ High Court ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದ್ದು, ತುರ್ತು ವಿಚಾರಣೆ ನಡೆಸಲು ಕೋರಿ ವಕೀಲ ಶ್ರೀಧರ್ ಪ್ರಭು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಮೂರನೇ ಅಲೆ ನಿಯಂತ್ರಿಸಲು ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ಕಾಂಗ್ರೆಸ್ ನಾಯಕರು ಕೊರೊನಾ ನಿಮಯಗಳನ್ನು ಮೀರಿ ನಡೆಸುತ್ತಿರುವ ಪಾದಯಾತ್ರೆಯಿಂದ ಕೊರೊನಾ ಸೋಂಕು ಹಬ್ಬುವ ಸಾಧ್ಯತೆಗಳಿವೆ. ಸರ್ಕಾರ ಪಾದಯಾತ್ರೆಯನ್ನು ತಡೆಯಲು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಮಾಸ್ಕ್ ಇಲ್ಲದೇ ನಾಯಕರು ಶಾಲೆಯಲ್ಲಿ ಮಕ್ಕಳನ್ನೂ ಸಹ ಭೇಟಿ ಮಾಡುತ್ತಿದ್ದು, ಈ ಪಾದಯಾತ್ರೆಯಿಂದ ಹೆಚ್ಚು ಜನರು ಸೋಂಕಿರತಾಗಿ ಸೂಪರ್ ಸ್ಪ್ರೆಡರ್ ಆಗುವ ಸಾಧ್ಯತೆ ಇದೆ. ಹಾಗಾಗಿ ಪಿಐಎಲ್ ಅರ್ಜಿಯನ್ನು ತುರ್ತು ವಿಚಾರಣೆಗೆ ನ್ಯಾಯಾಲಯ ಪರಿಗಣಿಸಬೇಕು ಎಂದು ವಕೀಲ ಶ್ರೀಧರ್ ಪ್ರಭು ಮನವಿ ಮಾಡಿದ್ದಾರೆ. ಇಂದು ಮಧ್ಯಾಹ್ನ PIL ವಿಚಾರಣೆಗೆ ಹೈಕೋರ್ಟ್ ಒಪ್ಪಿಗೆ ನೀಡಿದೆ.