ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ (Border-Gavaskar Trophy) ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಪ್ರದರ್ಶನವನ್ನು ನೀಡಿತು. ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ತಂಡ 474 ರನ್ ಗಳಿಸಿತು.
ಆಸ್ಟ್ರೇಲಿಯಾ ಪರ ಸ್ಟೀವ್ ಸ್ಮಿತ್ 140 ರನ್ಗಳೊಂದಿಗೆ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. 197 ಎಸೆತಗಳಲ್ಲಿ 13 ಬೌಂಡರಿ ಹಾಗೂ 3 ಸಿಕ್ಸರ್ ಗಳಿಸಿ, ಅವರು ತಮ್ಮ ಟೆಸ್ಟ್ ವೃತ್ತಿಜೀವನದ 34ನೇ ಶತಕವನ್ನು ಸಿಡಿಸಿದರು.
ಭಾರತೀಯ ಬೌಲರ್ಸ್, ಜಸ್ಪ್ರೀತ್ ಬುಮ್ರಾ 4 ವಿಕೆಟ್ ಪಡೆದರೂ, ಉಳಿದ ಬೌಲರ್ಸ್‌ನಿಂದ ಹೆಚ್ಚಿನ ಸಹಾಯ ಸಿಗಲಿಲ್ಲ. ಜಸ್ಪ್ರೀತ್ ಬುಮ್ರಾ ಮೊದಲ ದಿನದಾಟದಲ್ಲಿ 3 ವಿಕೆಟ್ ಪಡೆದಿದರೂ, ಆಸ್ಟ್ರೇಲಿಯಾ ರನ್ ವೇಗವನ್ನು ನಿಯಂತ್ರಿಸಲು ಪ್ರಯತ್ನಿಸಿದರೂ, ಉಳಿದ ಬೌಲರ್ಸ್‌ರಿಂದ ನಿರೀಕ್ಷಿತ ಪ್ರದರ್ಶನ ಇಲ್ಲ.
ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲ್ಯಾಬುಸ್ಚಾಗ್ ಅವರ ಭರ್ಜರಿ ಬ್ಯಾಟಿಂಗ್ ಕಾರಣ, ಆಸ್ಟ್ರೇಲಿಯಾ ತಂಡ ಹೆಚ್ಚಿನ ರನ್ ಗಳೊಂದಿಗೆ ಮೊದಲ ಇನ್ನಿಂಗ್ಸ್ ಮುಗಿಸಲು ಸಾಧ್ಯವಾಯಿತು.