New Delhi: ಹಿರಿಯ ನಟ ಮಿಥುನ್ ಚಕ್ರವರ್ತಿ (Mithun Chakraborty) ಅವರು ಭಾರತೀಯ ಚಲನಚಿತ್ರೋದ್ಯಮದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ (Dadasaheb Phalke Award) ಭಾಜನರಾಗಿದ್ದಾರೆ.
ಭಾರತೀಯ ಚಿತ್ರರಂಗದಲ್ಲಿ ಅವರ ಪ್ರಯಾಣ ಹಾಗೂ ಸಿನಿ ರಂಗಕ್ಕೆ ನೀಡಿದ ಕೊಡುಗೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕೇಂದ್ರ ಸಚಿವ (Union Minister) ಅಶ್ವಿನಿ ವೈಷ್ಣವ್ (Ashwini Vaishnav) ಅವರು ತಿಳಿಸಿದ್ದಾರೆ.
ಭಾರತದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಭೂಷಣ (Padma Bhushan) ಪಡೆದ ಕೆಲವೇ ತಿಂಗಳಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ (Dadasaheb Phalke Award) ನೀಡಿ ಗೌರವಿಸಲಾಗುತ್ತದೆ.
ಮಿಥುನ್ ಚಕ್ರವರ್ತಿ ಅವರು ಕೇವಲ ನಟರಷ್ಟೇ ಅಲ್ಲ, TV ನಿರೂಪಕ, ನಿರ್ಮಾಪಕ, ರಾಜಕಾರಣಿ ಆಗಿದ್ದಾರೆ. ಹಿಂದಿ ಹಾಗೂ ಬಂಗಾಳಿ ಸಿನಿಮಾಗಳಲ್ಲಿ ಅತ್ಯಂತ ಹೆಚ್ಚು ಹೆಸರು ಪಡೆದಿದ್ದಾರೆ. ಇವರು 1976ರಲ್ಲಿ ಮೊದಲ ಬಾರಿಗೆ ಹಿಂದಿ ಸಿನಿಮಾ ಮೃಗಯಾದಲ್ಲಿ ಅಭಿನಯ ಮಾಡಿದ್ದರು. ಅಂದಿನಿಂದ ಈವರೆಗೂ ಚಿತ್ರರಂಗದಲ್ಲಿ ದುಡಿಯುತ್ತಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮೂಲಕ ಎಲ್ಲರಿಗೂ ಈ ಮಾಹಿತಿಯನ್ನು ನೀಡಿದ್ದಾರೆ. ಮಿಥುನ್ ಚಕ್ರವರ್ತಿ ಬಾಲಿವುಡ್ನಲ್ಲಿ ಅನೇಕ ಉತ್ತಮ ಚಿತ್ರಗಳನ್ನು ಮಾಡಿದ್ದಾರೆ, ಅದು ಪ್ರೇಕ್ಷಕರಿಂದ ಬಹಳ ಮೆಚ್ಚುಗೆ ಪಡೆದಿದೆ. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟನಿಗೆ ಈ ಪ್ರಶಸ್ತಿಯನ್ನು ನೀಡಲಾಗುವುದು. ಈ ಸಮಾರಂಭವು 8 ಅಕ್ಟೋಬರ್ 2024 ರಂದು ನಡೆಯಲಿದೆ.