Chikkaballapur : ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (MLA Pradeep Eshwar) ಸೋಮವಾರ ತಾಲ್ಲೂಕಿನ ಕಮ್ಮಗುಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದಗಿರಿ ನಲ್ಲಪ್ಪನಹಳ್ಳಿ, ರಾಮಪಟ್ಟಣ, ಆರ್.ಕಂಬಾಲಹಳ್ಳಿ ಗ್ರಾಮಗಳಲ್ಲಿ ‘ನಮ್ಮ ಊರಿಗೆ ನಮ್ಮ ಶಾಸಕರು’ (Namma Oorige Namma Shasakaru) ಕಾರ್ಯಕ್ರಮ ನಡೆಸಿದರು.
ಗ್ರಾಮಗಳಲ್ಲಿ ಯಾವ ಸಮಸ್ಯೆಗಳು ಇವೆ ಎನ್ನುವ ಬಗ್ಗೆ ಗ್ರಾಮಸ್ಥರು ತಿಳಿಸಿದರು. ಕಂದಾಯ, ಚರಂಡಿ, ರಸ್ತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದಾಗ ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳನ್ನು ಕರೆಯಿಸಿ ಈ ಕೆಲಸ ಕಾರ್ಯಗಳು ಆಗಬೇಕು ಮತ್ತು ಸಮಸ್ಯೆಗಳನ್ನು ಪರಿಹರಿಸಿ ಎಂದು ಸೂಚಿಸಿದ ಶಾಸಕರು “ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ಕೊಡಿಸಲಾಗುವುದು. ತಂದೆ ಇಲ್ಲದ ನಾಲ್ಕು ಮಕ್ಕಳನ್ನು ಹಾಸ್ಟೆಲ್‌ಗೆ ಸೇರಿಸುವ ವ್ಯವಸ್ಥೆ ಮಾಡಲಾಗುವುದು. ವಾಲ್ಮೀಕಿ ಭವನ ನಿರ್ಮಾಣಕ್ಕೆ ಜನರು ಕೋರಿದ್ದು ಆ ಬಗ್ಗೆ ಕ್ರಮವಹಿಸಲಾಗುವುದು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಅನಿಲ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
The post MLA Pradeep Eshwar ರಿಂದ ನಮ್ಮ ಊರಿಗೆ ನಮ್ಮ ಶಾಸಕರು ಕಾರ್ಯಕ್ರಮ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.