New Delhi: ಉಕ್ರೇನ್ ವಿರುದ್ಧ ಪರಮಾಣು ಶಸ್ತ್ರಾಸ್ತ್ರ ಬಳಸಬಾರದು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರನ್ನು ಮನವೊಲಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪೋಲೆಂಡ್‌ನ ಉಪ ವಿದೇಶಾಂಗ ಸಚಿವ ವ್ಲಾಡಿಸ್ಲಾವ್ ಟಿಯೋಫಿಲ್ ಬಾರ್ಟೋಸ್ಜೆವ್ಸ್ಕಿ (Polish Deputy Foreign Minister Wladyslaw Teofil Bartoszewski) ತಿಳಿಸಿದ್ದಾರೆ.
Bartoszewski ಅವರು ಎಎನ್‌ಐಗೆ ನೀಡಿದ ಹೇಳಿಕೆಯಲ್ಲಿ, “ನಮಗೆ ಶಾಶ್ವತ ಶಾಂತಿ ಬೇಕು. ಉಕ್ರೇನ್ ನಲ್ಲಿ ಸ್ಥಿರತೆ ಮತ್ತು ಶಾಂತಿ ಅಗತ್ಯ. ಪ್ರಧಾನಿ ಮೋದಿ ಅವರು ಪುಟಿನ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ” ಎಂದರು.
ಪುಟಿನ್ ಉಕ್ರೇನ್ ಪ್ರದೇಶದಲ್ಲಿ ಪರಮಾಣು ಶಸ್ತ್ರಾಸ್ತ್ರ ಬಳಸಿ ಬೆದರಿಕೆ ಹಾಕಿದ್ದರು. ಆದರೆ, ಅಮೆರಿಕ ಅವರ ನಿರ್ಧಾರವನ್ನು ಬದಲಿಸಲು ವಿಫಲವಾಯಿತು. ಅಂತಿಮವಾಗಿ, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮತ್ತು ಪ್ರಧಾನಿ ಮೋದಿ ಅವರ ಫೋನ್ ಕರೆಗಳು ಪುಟಿನ್ ಅವರ ನಿರ್ಧಾರವನ್ನು ಬದಲಾಯಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದವು.
ಭಾರತ ಮತ್ತು ಚೀನಾ ಯುದ್ಧಕ್ಕೆ ಬೆಂಬಲ ನೀಡುವುದಿಲ್ಲ ಎಂಬ ಸಿದ್ಧಾಂತ ಸ್ಪಷ್ಟವಾಗುತ್ತಿದ್ದಂತೆ, ಪುಟಿನ್ ಅವರ ನಡೆ ಬದಲಾಗಿತು. ಈ ಕಾರಣದಿಂದ, ಈ ನಿರ್ಧಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು Bartoszewski ಹೇಳಿದ್ದಾರೆ.