Search
WhatsApp alerts

Home › Karnataka

Muda case ದೂರುದಾರ ಸ್ನೇಹಮಯಿ ಕೃಷ್ಣ ನಾಪತ್ತೆ

administrator · Published

MUDA Scam

Bengaluru: ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಮುಡಾ ಹಗರಣದ (Muda case) ಪ್ರಮುಖ ದೂರುದಾರರಾದ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಸೀರೆ ಕಳ್ಳತನದ ಆರೋಪ ಮಾಡಿದ್ದ ಅವರು, ಆ ಆರೋಪದ ಬೆನ್ನಲ್ಲೇ ತಾವು ನಾಪತ್ತೆಯಾಗಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು, ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ನೀಡಿದ ಲಕ್ಷಾಂತರ ರೂಪಾಯಿ ಮೌಲ್ಯದ ಸೀರೆಗಳನ್ನು ಮಾರಾಟ ಮಾಡಿದ ಪ್ರಭಾವಶಾಲಿ ಅಧಿಕಾರಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇತ್ತೀಚೆಗೆ ಈ ಬಗ್ಗೆ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ದೂರು ನೀಡಿದಿದ್ದರು.

ನಾಪತ್ತೆಯಾದ ಕೃಷ್ಣರ ಮೊಬೈಲ್ ಹೀಗೆಯೇ ಮೂರು ದಿನಗಳಿಂದ ಸ್ವಿಚ್ ಆಫ್ ಆಗಿದೆ ಎನ್ನಲಾಗಿದೆ. ಇದರಿಂದ, ಪೊಲೀಸರು ಅವರನ್ನು ಹುಡುಕಲು ಕಾರ್ಯಾಚರಣೆ ಆರಂಭಿಸಿದ್ದಾರೆ.

ಸ್ನೇಹಮಯಿ ಕೃಷ್ಣ, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ FIR ದಾಖಲಿಸುವಂತೆ ಕೋರಿದ್ದು, ಇದೀಗ ಅವರು ಸುದ್ದಿಯಲ್ಲಿದ್ದಾರೆ.

For Daily Updates WhatsApp ‘HI’ to 7406303366

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page