Bengaluru: ಮುಡಾ ಪ್ರಕರಣದಿಂದ (MUDA case) ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದೆ. ಪ್ರಕರಣದ ತನಿಖೆ ಕೂಡ ತೀವ್ರಗೊಂಡಿದೆ. ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ (CM Siddaramaiah) ರಾಜೀನಾಮಗೆ ಆಗ್ರಹಿಸುತ್ತಲೇ ಇದ್ದಾರೆ.
ಈ ಮಧ್ಯೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (Mysore Urban Development Authority) ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ (K Marigowda) ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜೀನಾಮೆಗೆ ಒತ್ತಡ ಇತ್ತ ಎಂಬ ಪ್ರಶ್ನೆಗೆ ಉತ್ತರಿಸಿದ ಮರಿಗೌಡ ಅವರು, ನನ್ನ ಮೇಲೆ ಯಾವುದೇ ಒತ್ತಡ ಇಲ್ಲ. ಆರೋಗ್ಯ ಸರಿಯಿಲ್ಲದ ಕಾರಣ ರಾಜೀನಾಮೆ ಕೊಟ್ಟಿದ್ದೇನೆ. ಸೈಟ್ ವಿಚಾರವಾಗಿ ಸಿಎಂ ಅವರು ಯಾವುದೇ ಒತ್ತಡ ನನ್ನ ಮೇಲೆ ಹಾಕಿಲ್ಲ.
ಸಿದ್ದರಾಮಯ್ಯ ನಮ್ಮ ನಾಯಕರು, 40 ವರ್ಷಗಳಿಂದ ಜೊತೆಯಲ್ಲಿ ಇದ್ದೇನೆ. ತಾಲೂಕು, ಜಿಲ್ಲಾ ಪಂಚಾಯತ ಅಧ್ಯಕ್ಷರಾಗಿ ನನ್ನನ್ನು ಮಾಡಿದ್ದರು. ಯಾವತ್ತು ಕೂಡಾ ಸಿದ್ದರಾಮಯ್ಯ ಅವರು ಅಕ್ರಮ ಮಾಡಿ ಅಂತ ಹೇಳಿಲ್ಲ. ಮುಡಾ ವಿಚಾರದಲ್ಲೂ ಸಿಎಂ ಒತ್ತಡ ಹಾಕಿಲ್ಲ.
ಎರಡು ಬಾರಿ ಸ್ಟ್ರೋಕ್ ಆಯ್ತು, ಆರೋಗ್ಯ ಸರಿಯಿಲ್ಲ. ಹೀಗಾಗಿ ಮುಡಾ ಅಧ್ಯಕ್ಷರಾಗಿ ಮುಂದುವರೆಯಲು ಆಗುವುದಿಲ್ಲ ಅಂತ ರಾಜೀನಾಮೆ ಕೊಟ್ಟಿದ್ದೇನೆ. ಆದರೆ ಇಲಾಖೆ ಸಚಿವರು ರಾಜೀನಾಮೆಗೆ ಒತ್ತಡ ಮಾಡಿದರೂ ಎಂಬ ಸುದ್ದಿ ಸತ್ಯಕ್ಕೆ ದೂರವಾದ ಮಾತು ಎಂದು ಸ್ಪಷ್ಟಪಡಿಸಿದ್ದಾರೆ.