back to top
21.8 C
Bengaluru
Sunday, January 19, 2025
HomeKarnatakaMUDA CASE-Siddaramaiah ವಿರುದ್ಧ FIR ತೂಗುಗತ್ತಿ!

MUDA CASE-Siddaramaiah ವಿರುದ್ಧ FIR ತೂಗುಗತ್ತಿ!

- Advertisement -
- Advertisement -

Bengaluru: ಮುಡಾ ಹಗರಣದಲ್ಲಿ ಲೋಕಾಯುಕ್ತ ಸುಳಿಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ (Siddaramaiah) ದಿನ ದಿನಕ್ಕೂ ಆತಂಕ ಹೆಚ್ಚಾಗುತ್ತಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹಿನ್ನೆಲೆ, ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್ಪಿ ಗುರುವಾರ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಲೋಕಾಯುಕ್ತ ಮೈಸೂರು ಎಸ್ಪಿ ಉದೇಶ್ ಅವ್ರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ.

ಇಂದು ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ FIR ದಾಖಲಾಗುವ ಸಾಧ್ಯತೆಯಿದೆ. FIR ನಲ್ಲಿ ಸಿಎಂ ಸಿದ್ದರಾಮಯ್ಯ A1 (ಆರೋಪಿ ನಂಬರ್1) ಆಗುವ ಸಾಧ್ಯತೆ ಇದೆ. ಮತ್ತೊಂದೆಡೆ FIR ದಾಖಲಿಸಲು ವಿಳಂಬವಾಗುತ್ತಿದೆ ಎಂದು ಆರೋಪಿಸಿದ ದೂರುದಾರ ಸ್ನೇಹಮಯಿ ಕೃಷ್ಣ, ಎಸ್ಪಿ ವಿರುದ್ಧವೇ ದೂರು ನೀಡಿದ್ದಾರೆ. ಕೋಳಿವಾಡ ಹೇಳಿಕೆ ನೀಡಿದ್ದಾರೆ.

ಸಿಎಂ ರಾಜೀನಾಮೆಗೆ ಒತ್ತಾಯಿಸಿ ನಿನ್ನೆ ವಿಧಾನಸೌಧ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಸಿದ್ದರಾಮಯ್ಯ ರಾಜೀನಾಮೆ ಕೊಡೋವರೆಗೂ ಬಿಡಲ್ಲ ಎಂದು ಬಿಜೆಪಿ ನಾಯಕರು ಎಚ್ಚರಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ಅವ್ಯವಹಾರಗಳ ಕುರಿತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿಎನ್ ದೇಸಾಯಿ ನೇತೃತ್ವದ ಏಕವ್ಯಕ್ತಿ ತನಿಖಾ ಆಯೋಗ ತನಿಖೆ ನಡೆಸಲಿದೆ ಬುಧವಾರ ಸ್ಪಷ್ಟಪಡಿಸಿದ್ದಾರೆ

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!

You cannot copy content of this page