Mysore: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Enforcement Directorate-ED) ಕಚೇರಿ ಮತ್ತು ಮುಡಾ (MUDA) ಪ್ರಕರಣದ A4 ದೇವರಾಜು (Devaraj) ಮನೆ ಮೇಲೆ ಶುಕ್ರವಾರ (ಅ.18) ರಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದರು. ರಾತ್ರಿವರೆಗೂ ಅಧಿಕಾರಿಗಳು ಮುಡಾ (Muda) ಕಚೇರಿಯಲ್ಲಿ ದಾಖಲೆಗಳನ್ನು ಪರಿಶೀಲಿಸಿದರು.
ಮುಡಾ ಕಚೇರಿ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳು ಮುಡಾ ಅಕ್ರಮ, 14 ಸೈಟ್, ಅಧಿಸೂಚನೆ, ಡಿನೋಟಿಫಿಕೇಷನ್, ಭೂಸ್ವಾಧೀನ, ಪರಿಹಾರ, ಹಂಚಿಕೆ ಪತ್ರ, CM ಪತ್ನಿ ಪಡೆದಿದ್ದಾರೆ ಎನ್ನಲಾದ 14 ಸೈಟ್ಗಳು ಸೇರಿದಂತೆ ಇಡಿ ಮುಡಾದಲ್ಲಿ ನಡೆದಿರುವ ಹಗರಣದ ಬಗ್ಗೆ ಇಡಿ ಪ್ರಶ್ನೆ ಕೇಳಿತ್ತು. ಒಂದಲ್ಲ ಎರಡಲ್ಲ ಬರೋಬ್ಬರಿ 41 ಪ್ರಶ್ನೆಗಳ ಮುಡಾ ಆಯುಕ್ತರ ಮುಂದಿಟ್ಟಿತ್ತು.
ಇಡಿ ಅಧಿಕಾರಿಗಳು ಶುಕ್ರವಾರ ದೇವರಾಜು ಅವರ ಮನೆಯಲ್ಲಿ ಕೆಸರೆ ಗ್ರಾಮದ ಸರ್ವೆ ನಂ.464ರ ಭೂ ದಾಖಲೆಗಳನ್ನು ವಶಕ್ಕೆ ಪಡೆದರು. ಈ ದಾಖಲೆಗಳನ್ನು ಇಟ್ಟುಕೊಂಡು ಇಡಿ ಅಧಿಕಾರಿಗಳು ಪ್ರಾಥಮಿಕ ವಿಚಾರಣೆ ನಡೆಸಿದರು.
ಅಲ್ಲದೇ ಅಗತ್ಯವಿದ್ದಾಗ ನೋಟಿಸ್ ಜಾರಿ ಮಾಡಿದಾಗ ಅಗತ್ಯ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚನೆ ನೀಡಿದರು. ಹಾಗೇ ಪ್ರಕರಣ ಗಂಭೀರವಾಗಿದ್ದು ತನಿಖೆಗೆ ಸಹಕರಿಸುವಂತೆ ತಾಕೀತು ಮಾಡಿದರು.
ಇಡಿ ಅಧಿಕಾರಿಗಳು ಇಂದೂ ಸಹ ಮುಡಾ ಕಚೇರಿಯಲ್ಲಿ ದಾಖಲೆ ಪರಿಶೀಲನೆ ಮಾಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಮುಡಾ ಕಚೇರಿಗೆ ಇಡಿ ಅಧಿಕಾರಿಗಳು ತೆರಳಲಿದ್ದಾರೆ. ಶುಕ್ರವಾರ ಬೆಳಗ್ಗೆ 11 ರಿಂದ ರಾತ್ರಿ 11ರವರೆಗೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಸತತ 12 ಗಂಟೆಗಳ ಕಾಲ ಮುಡಾ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದರು.