Search
WhatsApp alerts

Home › Chitradurga

Muruga Mutt ಮುರುಘಾಶ್ರೀ ಬಿಡುಗಡೆಗೆ ​ಆದೇಶ

administrator · Published

Muruga Mutt Seer Released from jail

Chitradurga : ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಶ್ರೀಗಳನ್ನು ಬಿಡುಗಡೆ ಮಾಡುವಂತೆ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಸಾಕ್ಷ್ಯಾಧಾರಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.

ಈ ಹಿಂದೆ ಹೈಕೋರ್ಟ್ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿತ್ತು, ಆದರೆ ಎಲ್ಲಾ ಸಾಕ್ಷ್ಯಾಧಾರಗಳನ್ನು ಸಲ್ಲಿಸುವವರೆಗೆ ಬಂಧನದಲ್ಲಿರಲು ಸುಪ್ರೀಂ ಕೋರ್ಟ್ (Supreme Court) ಸೂಚನೆ ನೀಡಿತ್ತು. 12 ಸಾಕ್ಷಿಗಳ ಸಾಕ್ಷ್ಯ ವಿಚಾರಣೆ ಈಗ ಮುಕ್ತಾಯಗೊಳಿಸಲಾಗಿದ್ದು, ನ್ಯಾಯಾಲಯವು ಅವರನ್ನು ಬಿಡುಗಡೆ ಮಾಡಿದೆ.

ಜಿಲ್ಲಾ ಕಾರಾಗೃಹದಲ್ಲಿ ನಡೆದ ವಿಧಿವಿಧಾನಗಳ ನಂತರ ಮುರುಘಾ ಶ್ರೀಗಳು ಬಿಡುಗಡೆಯಾಗಲಿದ್ದು, ಚಿತ್ರದುರ್ಗ ಜೈಲಿನಿಂದ ದಾವಣಗೆರೆಗೆ ತೆರಳುವ ನಿರೀಕ್ಷೆಯಿದೆ.

For Daily Updates WhatsApp ‘HI’ to 7406303366

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page