
Bengaluru: ರಾಜ್ಯದ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಇಂದು ಮುಸ್ಲಿಂ ಮೀಸಲಾತಿ (Muslim Reservation) ಕುರಿತು ತೀವ್ರ ಚರ್ಚೆ ನಡೆಯುವ ಸಾಧ್ಯತೆ ಇದೆ. ಕಾಮಗಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ನಿರ್ಧಾರ ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.
ಜೆಡಿಎಸ್ ಮತ್ತು ಬಿಜೆಪಿ ಈ ಕ್ರಮವನ್ನು ತೀವ್ರವಾಗಿ ಖಂಡಿಸುತ್ತಿದ್ದು, ಧರ್ಮ ಆಧಾರಿತ ಮೀಸಲಾತಿ ಸಂವಿಧಾನ ವಿರೋಧಿ ಎಂದು ಬಿಜೆಪಿ ವಾದಿಸುತ್ತಿದೆ. ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ಕಣಿಗಿಳಿಸಲು ಬಿಜೆಪಿ ತಯಾರಿ ನಡೆಸಿದೆ.
ಇದಕ್ಕೆ ಪ್ರತಿಯಾಗಿ, ಕಾಂಗ್ರೆಸ್ ಪಕ್ಷವೂ ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಸಜ್ಜಾಗಿದೆ. “ನಾವು ಮುಸ್ಲಿಮರಿಗೆ ಮೀಸಲಾತಿ ನೀಡಿಲ್ಲ, ಇದು ಅಲ್ಪಸಂಖ್ಯಾತರಿಗೆ ನೀಡಲಾದ ಮೀಸಲಾತಿ. ಸಂವಿಧಾನ ಸಮಾನ ಹಕ್ಕುಗಳನ್ನು ಒತ್ತಿಹೇಳುತ್ತದೆ” ಎಂದು ಕಾಂಗ್ರೆಸ್ ನಾಯಕರು ಪ್ರತಿಯಾಗಿ ವಾಗ್ದಾಳಿ ನಡೆಸುವ ನಿರೀಕ್ಷೆಯಿದೆ.