
Mysuru: ನಗರದಲ್ಲಿ ಮೊನ್ನೆ ನಡೆದ ಗಲಭೆ ಸಂಬಂಧಿತ (Mysore riot case) ಪ್ರಕರಣದಲ್ಲಿ ಪೊಲೀಸರು ಸತೀಶ್ ಅಲಿಯಾಸ್ ಪಾಂಡುರಂಗನನ್ನು ವಶಕ್ಕೆ ಪಡೆದು ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಜಾಮೀನು ಕುರಿತು ನಡೆದ ವಿಚಾರಣೆಯಲ್ಲಿ, ನ್ಯಾಯಾಲಯ ತೀರ್ಪನ್ನು ಶನಿವಾರಕ್ಕೆ ಮುಂದೂಡಿದೆ.
ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದರಿಂದ ಸತೀಶ್ ವಿರುದ್ಧ ಆರೋಪ ಕೇಳಿಬಂದಿದೆ. ಈ ಸಂಬಂಧ ಅವರ ಪರ ವಕೀಲರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಇಂದು ಜಾಮೀನು ಸಿಗುವ ಸಾಧ್ಯತೆಯಿದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.