H.D Kote, Mysuru (Mysore) : ಎಚ್.ಡಿ.ಕೋಟೆ ತಾಲ್ಲೂಕಿನ ನೂರಲಕುಪ್ಪೆ ‘ಬಿ’ ಗ್ರಾಮದ ಜಮೀನಿನಲ್ಲಿ ಹುಲಿ ಹೆಜ್ಜೆ ಗುರುತು (Tiger Footprint) ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಗ್ರಾಮದ ನಿವಾಸಿಗಳಾದ ರಾಜಣ್ಣ ಮತ್ತು ವಿಜಯ್ ಎಂಬುವವರು ಜಮೀನಿಗೆ ನೀರು ಹಾಯಿಸಲು ಹೋದಾಗ ಹುಲಿ ಕಾಣಿಸಿದ ಗ್ರಾಮಸ್ಥರ ದೂರಿನ ಮೇರೆಗೆ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಸುತ್ತಲಿನ ಜಮೀನುಗಳಲ್ಲಿ ಪರಿಶೀಲನೆ ನಡೆಸಿದ್ದಾಗ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ.
‘ಹುಲಿ ಹೆಜ್ಜೆ ಗುರುತು ಪತ್ತೆಯಾಗಿರುವ ಸ್ಥಳದಲ್ಲಿ ಸಿಬ್ಬಂದಿ ಗಸ್ತು ತಿರುಗಲು ಸೂಚಿಸಲಾಗಿದ್ದು ಮತ್ತೆ ಹುಲಿ ಕಾಣಿಸಿಕೊಂಡಲ್ಲಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಮೇಲೆ ಹುಲಿ ಸೆರೆಗೆ ಕ್ರಮ ವಹಿಸಲಾಗುವುದು’ ಎಂದು ಸಾಮಾಜಿಕ ವಲಯ ಅರಣ್ಯಾಧಿಕಾರಿ ಮಧು ಹೇಳಿ ಗ್ರಾಮಸ್ಥರಿಗೆ ಧೈರ್ಯ ತುಂಬಿದರು