Home Karnataka Chikkaballapura H.N. ವ್ಯಾಲಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು

H.N. ವ್ಯಾಲಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (Bagepalli), ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿನ ಕೆರೆಗಳಿಗೆ ಬುಧವಾರ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌ ಬೋಸರಾಜು (N S Boseraju) ಭೇಟಿ (Visit) ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವನ್ನು ವೃದ್ಧಿಗೊಳಿಸುವ ನಿಟ್ಟಿನಲ್ಲಿ ಸಂಸ್ಕರಿಸಿದ ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಾರಂಭಿಸಲಾಗಿದ್ದು ಎಚ್‌.ಎನ್‌ ವ್ಯಾಲಿಯಿಂದ ಎರಡನೇ ಹಂತದ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಯೋಜನೆ ಪ್ರಗತಿಯಲ್ಲಿದೆ. ಈ ಯೋಜನೆಯ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವುದರಿಂದ ಜಿಲ್ಲೆಯ ರೈತರಿಗೆ ಅನುಕೂಲವಾಗುತ್ತದೆ. ಈ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲಾಖೆಯ ದಕ್ಷಿಣ ವಿಭಾಗದ ಸೂಪರಿಂಟೆಂಡೆಂಟ್‌ ಎಂಜಿನಿಯರ್‌ ಸಂಜೀವ್‌ ರಾಜು, ಕಾರ್ಯಪಾಲಕ ಎಂಜಿನಿಯರ್ ವಿಷ್ಣು ಕಾಮತ್‌ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದರು.

The post H.N. ವ್ಯಾಲಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version