Bengaluru: ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆ (Caste Survey) ಬಹುತೇಕ ಮುಕ್ತಾಯ ಹಂತದಲ್ಲಿದೆ. ಜನರು ಮತ್ತು ರಾಜಕೀಯ ನಾಯಕರು ಭಾಗವಹಿಸಿದ್ದಾರೆ. ಆಯೋಗ ಈಗಾಗಲೇ ತಿಳಿಸಿದ್ದಂತೆ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ.
ಇನ್ಫೋಸಿಸ್ ಮುಖ್ಯಸ್ಥರಾದ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರು ವೈಯಕ್ತಿಕ ಕಾರಣಗಳಿಂದ ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.
ನಾರಾಯಣಮೂರ್ತಿ ಮತ್ತು ಸುಧಾ ಮೂರ್ತಿ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು ಈ ರೀತಿಯಾಗಿ ಹೇಳಿದ್ದಾರೆ,
- “ನಾವು ಯಾವುದೇ ಹಿಂದುಳಿದ ಜಾತಿಗೆ ಸೇರಿಲ್ಲ.”
- “ನಮ್ಮ ಮಾಹಿತಿ ನೀಡುವುದಿಲ್ಲ. ಸರ್ಕಾರಕ್ಕೆ ಈ ಸಮೀಕ್ಷೆ ಉಪಯೋಗವಿಲ್ಲ.”
- “ನಮ್ಮ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ.”
ಇತ್ತೀಚೆಗೆ ಬಂಗಳೂರಿನ ಸದಾಶಿವನಗರ ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ ಸಮೀಕ್ಷೆ ನಡೆಸಲಾಗಿತ್ತು.
- ಡಿಕೆ ಶಿವಕುಮಾರ್ ಮತ್ತು ಕುಟುಂಬ ಸದಸ್ಯರು ಭಾಗವಹಿಸಿದ್ದರು.
- ಧರ್ಮ, ಜಾತಿ ಸೇರಿದಂತೆ ಪ್ರಮುಖ ಪ್ರಶ್ನೆಗಳಿಗೆ ಉತ್ತರ ನೀಡಿದರು.
- ಕೆಲವೊಮ್ಮೆ ಪ್ರಶ್ನೆ ಹೆಚ್ಚು ಎಂದು ಅವರು ವ್ಯಕ್ತಪಡಿಸಿದ್ದರು.
ಹಿರಿಯ ನ್ಯಾಯವಾದಿ ಬಿ.ವಿ. ಆಚಾರ್ಯ ಅವರ ಅಭಿಪ್ರಾಯ,
- ಜಾತಿಗಣತಿಯಲ್ಲಿ ಭಾಗವಹಿಸದೇ ಇರೋದು ಸೂಕ್ತ.
- ವೈಯಕ್ತಿಕ ಮಾಹಿತಿಯ ದುರುಪಯೋಗವಾಗುವ ಅಪಾಯವಿದೆ.







