New Delhi, India : ಇಂದು ಸಂಜೆ 4.30 ಕ್ಕೆ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ (Chief Ministers) Online ಸಭೆ ನಡೆಸಲಿದ್ದಾರೆ (Virtual Meeting). ದೇಶದಲ್ಲಿ ಸ್ಫೋಟಗೊಳ್ಳುತ್ತಿರುವ Omicron ಮತ್ತು Coronavirus Covid-19 ವೈರಸ್ ಹಿನ್ನೆಲೆಯಲ್ಲಿ ಇಂದಿನ ಸಭೆ ಮಹತ್ವ ಪಡೆದಿದೆ.
ಈಗಾಗಲೇ ಹಲವು ರಾಜ್ಯಗಳು Night curfew ಸೇರಿ ಕಠಿಣ ನಿರ್ಬಂಧಗಳನ್ನು ಹೇರಿವೆ. ಆದಾಗ್ಯೂ ಕೊರೊನಾ ಸಂಖ್ಯೆಯಲ್ಲಿ ಇಳಿಮುಖ ಕಾಣುತ್ತಿಲ್ಲ. ದೆಹಲಿ, ಮಹಾರಾಷ್ಟ್ರ, ಪಶ್ಚಿಮಬಂಗಾಳ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಅತ್ಯಂತ ವೇಗವಾಗಿ ಸೋಂಕು ಹರಡುತ್ತಿದೆ.
ಕಳೆದ ವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ Covid-19 ಪರಿಸ್ಥಿತಿಯ ಅವಲೋಕನ ನಡೆಸಿದ್ದರು. ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರದ ಸಿದ್ಧತೆ, ಲಸಿಕೆ ಅಭಿಯಾನದ ವೇಗ, ಒಮಿಕ್ರಾನ್ ಸೋಂಕಿನ ಸ್ವರೂಪ ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಲಾಗಿತ್ತು.
ಪ್ರಧಾನಿ ಹಾಗೂ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದಿನ ಸಂವಾದದಲ್ಲಿ ಸೋಂಕಿನ ವೇಗವನ್ನು ತಡೆಗಟ್ಟಲು ಏನೆಲ್ಲಾ ಹೊಸ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಲಿದ್ದಾರೆ ಎನ್ನುವುದು ಕುತೂಹಲಕಾರಿಯಾಗಿದೆ.