New Delhi: ಮುಂಗಾರು ಅಧಿವೇಶನದ ನಡುವೆ ಎರಡು ದಿನಗಳ NDA (ಭಾರತೀಯ ಜನತಾ ಪಕ್ಷದ ಮೈತ್ರಿಕೂಟ) ಸಂಸದೀಯ ಸಭೆ (NDA meeting) ಇಂದಿನಿಂದ ಆರಂಭವಾಗಿದೆ. ಈ ಸಭೆಯಲ್ಲಿ ಎನ್‌ಡಿಎಗೆ ಸೇರಿದ ಸಂಸದರು ಭಾಗವಹಿಸಿದ್ದಾರೆ.
ಆಗಸ್ಟ್ 7ರಂದು ನಡೆಯುವ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದ್ದು, ಅದಕ್ಕೂ ಮುನ್ನ ಮೈತ್ರಿಕೂಟ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಈ ಸಭೆ ನಡೆಯುತ್ತಿದೆ.
ವಿಷಯಗಳ ಚರ್ಚೆ
- ಪಹಲ್ಗಾಮ್ ದಾಳಿ
- ಆಪರೇಷನ್ ಸಿಂಧೂರ್ ಯಶಸ್ಸು
- ಬಿಹಾರದಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ವಿವಾದ
- ಸಂಸತ್ತಿನಲ್ಲಿ ವಿಪಕ್ಷಗಳ ಪ್ರತಿಭಟನೆ
ಈ ಎಲ್ಲಾ ವಿಚಾರಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಭೆಯಲ್ಲಿ ಸಂಸದರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಪ್ರಧಾನಿಗೆ ಸನ್ಮಾನ: ಭದ್ರತಾ ಕಾರ್ಯಾಚರಣೆಯಾದ ‘ಆಪರೇಷನ್ ಸಿಂಧೂರ್’ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ವೇಳೆ “ಹರ್ ಹರ್ ಮಹಾದೇವ್” ಹಾಗೂ “ಜೈ ಶ್ರೀ ರಾಮ್” ಘೋಷಣೆಗಳು ಕೇಳಿಬಂದವು.
ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿ ಎನ್‌ಡಿಎ ನಾಯಕರು ಭಾಗವಹಿಸಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿಪಕ್ಷಗಳೊಂದಿಗೆ ಸಮನ್ವಯ ಸಾಧಿಸಲು ಕಿರಣ್ ರಿಜಿಜು ಮತ್ತು ಕೆಲವು ಬಿಜೆಪಿ ಮುಖಂಡರು ನೇಮಕಗೊಳ್ಳುವ ಸಾಧ್ಯತೆ ಇದೆ.