ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (Maruti Suzuki India Limited – MSIL) ತನ್ನ ಹೊಚ್ಚ ಹೊಸ ನವೀಕರಿಸಿದ ಡಿಜೈರ್ (Maruti Suzuki Dzire) ಸೆಡಾನ್ ನವೆಂಬರ್ 11 ರಂದು ಬಿಡುಗಡೆ ಮಾಡಲು ಸಿದ್ಧವಾಗಿದೆ.
ಇದು ಸ್ವಿಫ್ಟ್‌ನೊಂದಿಗೆ ಕೆಲವು ಅಂಶಗಳೊಂಂದಿಗೆ ಹಂಚಿಕೊಳ್ಳುತ್ತದೆ. ಈ ಸೆಡಾನ್‌ನ್ನು ಕೈಗೆಟುಕುವ ಬೆಲೆಯಲ್ಲಿ ಪರಿಚಯಿಸುವ ಸಾಧ್ಯತೆಯಿದೆ. ಜೊತೆಗೆ ಹತ್ತಾರು ಹೊಸತನಗಳಿಗೂ ಸಾಕ್ಷಿಯಾಗಿರಲಿದೆ ಎನ್ನಲಾಗಿದೆ.
ಮಾರುತಿ ಸುಜುಕಿ ಡಿಜೈರ್ ಸೆಡಾನ್ಒಳಭಾಗವು ಅತ್ಯುತ್ತಮವಾದ ವಿನ್ಯಾಸ ಪಡೆದಿರಲಿದ್ದು, 5 ಸೀಟರ್ ವ್ಯವಸ್ಥೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಈ ಹೊಸ ಡಿಜೈರ್ ಕಾರಿನಲ್ಲಿ ಆರ್ಕ್ಟಿಕ್ ವೈಟ್, ಶೆರ್ವುಡ್ ಬ್ರೌನ್, ಫೀನಿಕ್ಸ್ ರೆಡ್, ಬ್ಲೂಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ (colour) ಆಯ್ಕೆಯಲ್ಲಿ ಲಭ್ಯವಿದೆ.
ಹೊಚ್ಚ ಹೊಸ ಡಿಜೈರ್ ಸೆಡಾನ್ ಕಾರಿನಲ್ಲಿ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಒಳಗೊಂಡಿರಲಿದೆ. ಈ ಎಂಜಿನ್ 82 ಬಿಹೆಚ್‍ಪಿ ಪವರ್ ಮತ್ತು 108 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರುವ ಸಾಧ್ಯತೆಯಿದ್ದು, ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಮಾರಾಟಕ್ಕೂ ಬರಬಹುದು. ಸರಿ ಸುಮಾರು 32 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.
ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೆಟ್ ಕಂಟ್ರೋಲ್, ಟೈಪ್ ಸಿ ಚಾರ್ಜಿಂಗ್ ಪೋರ್ಟ್, ಸನ್‌ರೂಫ್ ಮತ್ತು ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.
ಈ ಮಾರುತಿ ಸುಜುಕಿ ಡಿಜೈರ್ ಕಾರಿನಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ರೂ.6.70 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ದರವನ್ನು ಹೊಂದಿರಬಹುದು ಎನ್ನಲಾಗಿದೆ.
ಡಿಜೈರ್ ಸೆಡಾನ್‌ಗೆ ಹೋಂಡಾ ಅಮೇಜ್, ಹ್ಯುಂಡೈ ಔರಾ ಹಾಗೂ ಟಾಟಾ ಟಿಗೂರ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ.