back to top
26.8 C
Bengaluru
Friday, February 6, 2026
HomeKarnatakaBengaluru UrbanBengaluru ಕಂಬಳ ಅ.26 ಕ್ಕೆ ನಡೆಯಲ್ಲ

Bengaluru ಕಂಬಳ ಅ.26 ಕ್ಕೆ ನಡೆಯಲ್ಲ

- Advertisement -
- Advertisement -

Bengaluru: ಬೆಂಗಳೂರಿನ ಅರಮನೆ ಮೈದಾನದಲ್ಲಿ (Palace Ground) ಅಕ್ಟೋಬರ್ 26 ರಂದು ಕಂಬಳ (ಕೋಣಗಳ ಓಟ) ಸ್ಪರ್ಧೆ ನಡೆಸುತ್ತಿಲ್ಲ ಮತ್ತು ಬೇರೆಲ್ಲೂ ಕಂಬಳ ನಡೆಸುವ ಸಂಬಂಧ ಸರ್ಕಾರದ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿಲ್ಲ ಎಂಬ ಬೆಂಗಳೂರು ಕಂಬಳ ಸಮಿತಿಯ (Bengaluru Kambala Committee) ವಾದವನ್ನು ಪರಿಗಣಿಸಿದ ಕರ್ನಾಟಕ ಹೈಕೋರ್ಟ್ (Karnataka High Court) ಅರ್ಜಿಯ ವಿಚಾರಣೆಯನ್ನು ಮುಂದೂಡಿತು.

ಬೆಂಗಳೂರು ಕಂಬಳ ಸಮಿತಿಗೆ ಸ್ಪರ್ಧೆ ಆಯೋಜಿಸಲು ಅನುಮತಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪ್ರಾಣಿ ದಯಾ ಸಂಘ ಪೆಟಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ನಡೆಸಿತು.

ಬೆಂಗಳೂರು ಕಂಬಳ ಸಮಿತಿ ಪ್ರತಿನಿಧಿಸಿದ್ದ ವಕೀಲ ವಿನೋದ್ ಕುಮಾರ್ ಅವರು “ಅಕ್ಟೋಬರ್ 26 ರಂದು ಕಂಬಳ ಸ್ಪರ್ಧೆ ಆಯೋಜಿಸುತ್ತಿಲ್ಲ” ಎಂದು ತಿಳಿಸಿದರು.

ಪೆಟಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು “ಕಂಬಳ ಸ್ಪರ್ಧೆ ನಡೆಸುವಾಗ ಅನುಮತಿ ನೀಡಲಾಗುತ್ತಿದೆ ಎಂಬ ವಿಚಾರವನ್ನು ನಮಗೆ ತಿಳಿಸಬೇಕು.

ಆಗ ನಾವು ನ್ಯಾಯಾಲಯದ ಮುಂದೆ ಬರುತ್ತೇವೆ. ನವೆಂಬರ್ 9ರಂದು ದಕ್ಷಿಣ ಕನ್ನಡ ಪಿಲಿಕುಳದ ಪ್ರಾಣಿ ಸಂಗ್ರಹಾಲಯದ ಪಕ್ಕದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡಲಾಗುತ್ತಿದೆ ಎನ್ನಲಾಗಿದೆ.

ಈ ಸಂಬಂಧ ಪ್ರಾಣಿ ಸಂಗ್ರಹಾಲಯದ ನಿರ್ದೇಶಕರು ಜಿಲ್ಲಾಧಿಕಾರಿಗೆ ಪತ್ರ ಬರೆದು ಸ್ಪರ್ಧೆಯ ಸಂದರ್ಭದಲ್ಲಿನ ಕೂಗಾಟದಿಂದ ಪ್ರಾಣಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ. ಈ ಸಂಬಂಧ ಹೆಚ್ಚುವರಿ ಅಫಿಡವಿಟ್ ಸಲ್ಲಿಸಲಾಗಿದೆ” ಎಂದರು.

ಕಂಬಳ ಸ್ಪರ್ಧೆಯು ಕರ್ನಾಟಕದ ಸಂಸ್ಕೃತಿಗೆ ಸಂಬಂಧಿಸಿದ್ದು, ಇದನ್ನು ಕರ್ನಾಟಕ ಮಾತ್ರವಲ್ಲದೇ ದೇಶಾದ್ಯಂತ ಕೊಂಡೊಯ್ಯುವ ಸಂದರ್ಭ ಬಂದಿದೆ. ಇಲ್ಲಿ ಪ್ರಾಣಿಗಳಿಗೆ ಹಿಂಸೆಯಾಗುತ್ತಿದೆಯೇ ಎಂಬ ಪ್ರಶ್ನೆ ಇದೆ.

ಕುದುರೆ ರೇಸ್ ನಡೆದಾಗ ಕುದುರೆಗಳನ್ನು ಬೇರೆ ದೇಶಗಳಿಂದ ಆಮದು/ರಫ್ತು ಮಾಡಲಾಗುತ್ತದೆ. ಬೇರೆ ರಾಜ್ಯಗಳಿಗೂ ಅವುಗಳನ್ನು ಸಾಗಿಸಲಾಗುತ್ತದೆ. ಯಾವುದೇ ನಿರ್ಧಾರ ಕೈಗೊಂಡರೂ ಪೀಠಕ್ಕೆ ತಿಳಿಸಲಾಗುವುದು” ಎಂದರು.

ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದ ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿತು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page