Davanagere: ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ‘ಪೊಲೀಸ್’ (Police) ಎಂದು ಬರೆಯಲು ಅವಕಾಶವಿಲ್ಲ. ಇದನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ (Home Minister Parameshwar) ಸ್ಪಷ್ಟಪಡಿಸಿದ್ದಾರೆ.
ಶ್ರವಣಬೆಳಗೊಳದ ಶಾಸಕ ಬಾಲಕೃಷ್ಣ ಸಿ.ಎನ್. ಅವರ ಪ್ರಶ್ನೆಗೆ ಲಿಖಿತವಾಗಿ ಉತ್ತರ ನೀಡಿದ ಅವರು, ಈ ನಿಯಮ ಉಲ್ಲಂಘನೆಯ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದ್ದು, 2022ರ ಸುತ್ತೋಲೆಯ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.