ಸೆಡನ್ ಪಾರ್ಕ್ ನಲ್ಲಿ ನಡೆದ ಇಂಗ್ಲೆಂಡ್ (England) ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ (New Zealand) ಐತಿಹಾಸಿಕ ಗೆಲುವು ಸಾಧಿಸಿದೆ. 423 ರನ್‌ಗಳ ಅಂತರದಿಂದ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಕಿವೀಸ್ (Kiwis) ಪಡೆ ಮತ್ತೊಂದು ಮಹತ್ವ ಸಾಧನೆ ಮಾಡಲು ಯಶಸ್ವಿಯಾಗಿದೆ.
ಟಾಮ್ ಲ್ಯಾಥಮ್ ನೇತೃತ್ವದ ನ್ಯೂಜಿಲೆಂಡ್ ತಂಡವು 2018 ರಲ್ಲಿ ಶ್ರೀಲಂಕಾವನ್ನು 423 ರನ್‌ಗಳಿಂದ ಸೋಲಿಸಿತ್ತು, ಮತ್ತು ಈಗ ಇಂಗ್ಲೆಂಡ್ ವಿರುದ್ಧವೂ ಅದೇ ಸಾಧನೆಯನ್ನು ಪುನರಾವರ್ತಿಸಿದೆ.
ನ್ಯೂಜಿಲೆಂಡ್, ಮೊದಲ ಎರಡು ಪಂದ್ಯಗಳಲ್ಲಿ ಸೋಲಿಸುವ ಮೂಲಕ ಇಂಗ್ಲೆಂಡ್ ಸರಣಿಯನ್ನು ಗೆದ್ದುಕೊಂಡಿದೆ, ಮೂರನೇ ಟೆಸ್ಟ್‌ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ಇಂಗ್ಲೆಂಡಿನ ಗೆಲುವನ್ನು ನಿಲ್ಲಿಸಿದೆ. ಆದರೆ, ಸರಣಿಯ ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ತಮ್ಮ ಜನಪ್ರಿಯತೆಯನ್ನು ಕಿವೀಸ್ ಪಡೆ ಉಳಿಸಿಕೊಂಡಿದೆ. ಸೋಲಿನ ಹೊರತಾಗಿಯೂ ಇಂಗ್ಲೆಂಡ್ 3 ಪಂದ್ಯಗಳ ಸರಣಿಯನ್ನು 2-1 ರಿಂದ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.