Bengaluru:ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ರಾಜ್ಯ ಸರ್ಕಾರದ (state government) ವಿವಿಧ ಸಂಸ್ಥೆಗಳು ಗುಡ್ನ್ಯೂಸ್ ಕೊಟ್ಟಿವೆ. ಇದೇ 20ರಂದು (ಅಕ್ಟೋಬರ್ 20ರ ಶನಿವಾರ) ಬೃಹತ್ ಉದ್ಯೋಗ ಮೇಳವನ್ನು (huge job fair) ಆಯೋಜಿಸಿದೆ.
ಈ ಉದ್ಯೋಗ ಮೇಳದಲ್ಲಿ 100ಕ್ಕಿಂತಲೂ ಹೆಚ್ಚಿನ ಪ್ರತಿಷ್ಠಿತ ಬೃಹತ್, ಮಾಧ್ಯಮ ಹಾಗೂ ಸಣ್ಣ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸಲಿವೆ. ಈ ಸಂಸ್ಥೆಗಳಲ್ಲಿ ಖಾಲಿ ಉಳಿದಿರುವ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಲಾಗಿದೆ.
ಬೆಂಗಳೂರು ನಗರ ಜಿಲ್ಲೆಯ KLE ಸಂಸ್ಥೆಯ ಎಸ್. ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ (ನಂ.1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ ಬೆಂಗಳೂರು – 560010) ಈ ಬೃಹತ್ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ. ವಾರಾಂತ್ಯವಾಗಿರುವುದರಿಂದ ಸಾವಿರಾರು ಜನ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ
ಅದರಲ್ಲಿ PUC, ITI, ಡಿಪ್ಲೋಮಾ, ನರ್ಸಿಂಗ್, ಪದವಿ, ಸ್ನಾತಕೋತರ ಪದವಿ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಈ ಉದ್ಯೋಗ ಮೇಳಕ್ಕೆ ಅತ್ಯಂತ ಸರಳವಾಗಿ ಅರ್ಜಿ ಸಲ್ಲಿಸಬಹುದಾಗಿದೆ. https://jobfair.calicut.nielit.in/ ಲಿಂಕ್ಗೆ ಭೇಟಿ ನೀಡುವ ಮೂಲಕ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ವಿವರಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಅಭ್ಯರ್ಥಿಗಳ ಬಯೋಡಾಟ ಹಾಗೂ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕು ಎಂದು ಬೆಂಗಳೂರಿನ ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.
ಬೃಹತ್ ಉದ್ಯೋಗ ಮೇಳವನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಭಾರತ ಸರ್ಕಾರದ ಭಾಗವಾಗಿರುವ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ತಂತ್ರಜ್ಞಾನ ಸಂಸ್ಥೆ ಮುಖ್ಯವಾಗಿ ಸಹಭಾಗಿತ್ವ ನೀಡುತ್ತಿದೆ.
ಇದರೊಂದಿಗೆ ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್, ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಕೈಜೋಡಿಸಿವೆ. ಅಲ್ಲದೇ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಸಹಕಾರವೂ ಇದೇ ಎಂದು ಹೇಳಲಾಗಿದೆ.