New Delhi: ಒಂದು ರಾಷ್ಟ್ರ ಒಂದು ಚುನಾವಣೆ (One Nation One Election) ಕುರಿತ ರಾಮನಾಥ್ ಕೋವಿಂದ್ ಸಮಿತಿ ವರದಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದ ಬಳಿಕ ವಿಷಯದಲ್ಲಿ ಬೆಳವಣಿಯನ್ನು ಕಾಣಬಹುದಾಗಿದೆ.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು ಈ ವರ್ಷದ ಮಾರ್ಚ್‌ನಲ್ಲಿ ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡಿದೆ.
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆದ 100 ದಿನಗಳಲ್ಲಿ ಸ್ಥಳೀಯ ಚುನಾವಣೆ ನಡೆಸುವಂತೆಯೂ ಸಮಿತಿ ಶಿಫಾರಸು ಮಾಡಿದೆ. ಸಮಿತಿಯು ಶಿಫಾರಸುಗಳ ಅನುಷ್ಠಾನವನ್ನು ಪರಿಶೀಲಿಸಲು ‘ಇಂಪ್ಲಿಮೆಂಟೇಶನ್ ಗ್ರೂಪ್’ ಅನ್ನು ಸ್ಥಾಪಿಸಲು ಪ್ರಸ್ತಾಪಿಸಿದೆ.