Search
WhatsApp alerts

Home › Featured

ʼಒಂದು ರಾಷ್ಟ್ರ, ಒಂದು ಚುನಾವಣೆ’ : ಕೇಂದ್ರ ಸರ್ಕಾರ ತಯಾರಿ, ಮೋದಿ ಸಂಪುಟ ಅನುಮೋದನೆ

administrator · Published

India Centre Government’s One Nation One Election Gets Cabinet Nod

New Delhi: ಒಂದು ರಾಷ್ಟ್ರ ಒಂದು ಚುನಾವಣೆ (One Nation One Election) ಕುರಿತ ರಾಮನಾಥ್​ ಕೋವಿಂದ್ ಸಮಿತಿ ವರದಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದ ಬಳಿಕ ವಿಷಯದಲ್ಲಿ ಬೆಳವಣಿಯನ್ನು ಕಾಣಬಹುದಾಗಿದೆ.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು ಈ ವರ್ಷದ ಮಾರ್ಚ್‌ನಲ್ಲಿ ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡಿದೆ.

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆದ 100 ದಿನಗಳಲ್ಲಿ ಸ್ಥಳೀಯ ಚುನಾವಣೆ ನಡೆಸುವಂತೆಯೂ ಸಮಿತಿ ಶಿಫಾರಸು ಮಾಡಿದೆ. ಸಮಿತಿಯು ಶಿಫಾರಸುಗಳ ಅನುಷ್ಠಾನವನ್ನು ಪರಿಶೀಲಿಸಲು ‘ಇಂಪ್ಲಿಮೆಂಟೇಶನ್ ಗ್ರೂಪ್’ ಅನ್ನು ಸ್ಥಾಪಿಸಲು ಪ್ರಸ್ತಾಪಿಸಿದೆ.

For Daily Updates WhatsApp ‘HI’ to 7406303366

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page