Bengaluru : ರಾಜ್ಯ ಸರ್ಕಾರದ ನಿಕಟಪೂರ್ವ ಮುಖ್ಯ ಕಾರ್ಯದರ್ಶಿ (Chief Secretary) ಪಿ. ರವಿಕುಮಾರ್ (P Ravikumar) ಅವರನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ನೂತನ ಅಧ್ಯಕ್ಷರನ್ನಾಗಿ (President) ನೇಮಕ ಮಾಡಲಾಗಿದ ಎಂದು ಇಂಧನ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
ರವಿಕುಮಾರ್ ರವರು ಮುಂದಿನ ಐದು ವರ್ಷಗಳ ಅವಧಿಗೆ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. 1984ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ರವಿಕುಮಾರ್, 2020ರ ಡಿಸೆಂಬರ್ ಅಂತ್ಯದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದು ೨೦೨೨ರ ಮೇ 31ರಂದು ನಿವೃತ್ತರಾಗಿದ್ದರು.