Bengaluru: ಅಕ್ಟೊಬರ್ 1ರ ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ವೈಟ್ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ (Whitefield police station) BMTC 13ನೇ ಘಟಕದ ವೋಲ್ವೋ ಬಸ್ ನಿರ್ವಾಹಕ ಯೋಗೇಶ್ (Volvo bus operator Yogesh) ಎಂಬುವವರಿಗೆ ಪ್ರಯಾಣಿಕನೋರ್ವ ಚಾಕು ಇರಿದಿದ್ದ ಘಟನೆ ನಡೆದಿತ್ತು.
ಈ ಘಟನೆ ಬೆನ್ನಲ್ಲೇ ಈಗ BMTC ಯ ಕಂಡಕ್ಟರ್, ಡ್ರೈವರ್ಗಳು ಬಿಎಂಟಿಸಿ ಎಂಡಿಗೆ ಪತ್ರ ಬರೆದಿದ್ದು ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ ಕೋರಿದ್ದಾರೆ.
ಮೊನ್ನೆ ಸಂಜೆ ವೈಟ್ ಫೀಲ್ಡ್ (Whitefield) ಬಳಿಯ ಐಟಿಪಿಎಲ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಬಿಎಂಟಿಸಿ ಕಂಡಕ್ಟರ್ ಯೋಗೇಶ್ (Conductor Yogesh) ಅವರಿಗೆ ಜಾರ್ಖಂಡ್ ಮೂಲದ ಹರ್ಷ ಸಿನ್ಹಾ ಚಾಕು ಇರಿದಿದ್ದ.
ಕಂಡಕ್ಟರ್ ಯೋಗೇಶ್ ಸದ್ಯ ವೈದೇಹಿ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಬಿಎಂಟಿಸಿ ಕಂಡಕ್ಟರ್ ಡ್ರೈವರ್ ಗಳಿಗೆ ಆತ್ಮರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ ಮನವಿ ಮಾಡಲಾಗಿದೆ.
ಸಂಸ್ಥೆಯ ಕನ್ನಡಿಗ ನೌಕರರ ಮೇಲೆ ಅನ್ಯ ರಾಜ್ಯದ ಪ್ರಯಾಣಿಕರಿಂದ ಮಾರಣಾಂತಿಕ ಹಲ್ಲೆ ನಡೆಯುತ್ತಿದೆ. ಉದಾಹಣೆಗೆ ದಿನಾಂಕ:01/10/2024 ರಂದು ಘಟಕ-13 ನಿರ್ವಾಹಕರಿಗೆ ಮಾರಣಾಂತಿಕ ಹಲ್ಲೆ ನೆಡೆದ ಘಟನೆಯೇ ಸಾಕ್ಷಿಯಾಗಿರುತ್ತದೆ.
ಆದ್ದರಿಂದ ಇವರುಗಳ ಜೀವ ರಕ್ಷಣೆಗಾಗಿ ಗನ್ ಲೈಸನ್ಸ್ ಪಡೆಯಲು ಅನುಮತಿ ಕೊಡಿಸಬೇಕಾಗಿ ಸಮಸ್ತ ಸಾರಿಗೆ ಸಂಸ್ಥೆಯ ನೌಕರರ ಪರವಾಗಿ ತಮ್ಮಲ್ಲಿ ಮನವಿಮಾಡಿಕೊಳ್ಳುತ್ತೇನೆ ಎಂದು ಬಿಎಂಟಿಸಿ ಕಂಡಕ್ಟರ್ ಕಂ ಡ್ರೈವರ್ ಯೋಗೇಶ್ ಗೌಡ ಅವರು ಪತ್ರ ಬರೆದಿದ್ದಾರೆ.