New Delhi : ನಾಲ್ಕೂವರೆ ತಿಂಗಳ ನಂತರ ದರ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಗಳು (Price) ಪರಿಷ್ಕರಣೆಯಾಗಿದ್ದು ಮಾರ್ಚ್ 22 ಮಧ್ಯರಾತ್ರಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ ತಲಾ 80 ಪೈಸೆಗಳಷ್ಟು ಏರಿಕೆಯಾಗಿದೆ (Hike) . ಇದರ ಜೊತೆಗೆ ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‍ಗೆ 50 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ.
ಪ್ರಸ್ತುತ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 101.42 ರೂ., ಡೀಸೆಲ್ ಲೀಟರ್ ಗೆ 85.80 ರೂ.
ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 96.21 ರೂ., ಲೀಟರ್ ಡೀಸೆಲ್ ಬೆಲೆ 87.47 ರೂ.
ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 110.82 ರೂ., ಡೀಸೆಲ್ ಪ್ರತಿ ಲೀಟರ್‌ಗೆ 95.00 ರೂ.
ಕೋಲ್ಕತ್ತಾದಲ್ಲಿ ಇಂದಿನ ಪೆಟ್ರೋಲ್ ಬೆಲೆ ಲೀಟರ್‌ಗೆ 105.51 ರೂ ಮತ್ತು ಪ್ರತಿ ಲೀಟರ್ ಡೀಸೆಲ್ ಬೆಲೆ 90.62 ರೂ ಆಗಿದೆ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 102.16 ರೂ., ಡೀಸೆಲ್ ಬೆಲೆ 92.19 ರೂ. ಗೆ ಮಾರಾಟವಾಗುತ್ತಿದೆ.