Ahmedabad: 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನವೊಂದು (Plane) ಅಹಮದಾಬಾದ್‌ನ (Ahmedabad)ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನವು ಲಂಡನ್‌ಗೆ ಹೊರಟಿತ್ತು.
ಪತನದ ಬಳಿಕ ವಿಮಾನದಲ್ಲಿ ಭಾರೀ ಬೆಂಕಿ ಉಂಟಾಗಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ.
“ವಿಮಾನ ಯಾವ ರೀತಿಯದಾಗಿದೆ ಎಂಬ ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲ” ಎಂದು ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ತಿಳಿಸಿದ್ದಾರೆ.